ಬೆಳಗಾವಿ | ಎಂಜಿನಿಯರಿಂಗ್ ಜತೆಗೆ, ಅರ್ಥಶಾಸ್ತ್ರ, ಇತಿಹಾಸ, ಕಾನೂನುಶಾಸ್ತ್ರ ಮತ್ತಿತರ ಕೋರ್ಸ್‌ಗಳಲ್ಲೂ ಸಾಧನೆ ಮಾಡಲು ಅತ್ಯುತ್ತಮ ಅವಕಾಶಗಳಿವೆ.

Date:

ಬೆಳಗಾವಿ ನಗರರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಹಮ್ಮಿಕೊಂಡಿದ್ದ ಪುನಃಶ್ವೇತನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಪ್ರಭಾಕರ ಕೋರೆ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲ ರಂಗಗಳ ಮಿಂಚುತ್ತಾರೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ, ಆರೋಗ್ಯದ ಕಡೆ ಗಮನ ಹರಿಸಬೇಕು ವೈದ್ಯಕೀಯ, ಎಂಜಿನಿಯರಿಂಗ್ ಜತೆಗೆ, ಅರ್ಥಶಾಸ್ತ್ರ, ಇತಿಹಾಸ, ಕಾನೂನುಶಾಸ್ತ್ರ ಮತ್ತಿತರ ಕೋರ್ಸ್‌ಗಳಲ್ಲೂ ಸಾಧನೆ ಮಾಡಲು ಅತ್ಯುತ್ತಮ ಅವಕಾಶಗಳಿವೆ. ಪಾಲಕರು ತಮ್ಮ ಮಕ್ಕಳಿಗೆ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡಿಸಬೇಕು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.

ಉದ್ಘಾಟಿಸಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಬದುಕಿನಲ್ಲಿ ಎಲ್ಲವನ್ನೂ ಕಳೆದುಕೊಂಡಾಗ ಶಿಕ್ಷಣವೇ ಚೈತನ್ಯ ನೀಡುವ ಶಕ್ತಿಯಾಗುತ್ತದೆ. ವಿದ್ಯಾರ್ಥಿಗಳು ಸತತ ಅಧ್ಯಯನದ ಮೂಲಕ ಬದುಕು ರೂಪಿಸಿಕೊಳ್ಳಬೇಕು’ ಎಂದರು.

ರಾಜಾ ಲಖಮಗೌಡ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ವಿಜಯಕುಮಾರ ಪಾಟೀಲ ಉಪಸ್ಥಿತರಿದ್ದರು. ಪ್ರಾಚಾರ್ಯ ವಿಶ್ವನಾಥ ಕಾಮಗೋಳ ಸ್ವಾಗತಿಸಿದರು. ಎನ್.ಆರ್.ಚಮಕೇರಿ ಅತಿಥಿ ಪರಿಚಯಿಸಿದರು. ಅರುಣಕುಮಾರ ವಂದಿಸಿದರು. ಪ್ರಿಯಾಂಕ ಮತ್ತು ಸರೋಜ ನಿರೂಪಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...