ಲಾಡ್ಜ್ಗಳಲ್ಲಿ ಕಳವು: ಮಹಿಳೆ ಬಂಧನ, ₹32.86 ಲಕ್ಷ ಸ್ವತ್ತು ವಶ
ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಲಾಡ್ಜ್ಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ₹32.86 ಲಕ್ಷ ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತೆಯನ್ನು ದೀಪಾ ಮಹಾಲಿಂಗ ಅವಟಗಿ (33) ಎಂದು ಗುರುತಿಸಲಾಗಿದೆ. ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ನಿವಾಸಿಯಾಗಿದ್ದು, ಪ್ರಸ್ತುತ ಸಂಕೇಶ್ವರದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 11 ಮೊಬೈಲ್ಫೋನ್ಗಳು, ನಗದು ಹಣ, ವಾಹನಗಳು ಹಾಗೂ ಇತರ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿ ಶಿವಾನಂದ ಉರೂಫ್ ವಿನೋದ ಶಂಕರಯ್ಯ ಮಠಪತಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಶೋಧ ಮುಂದುವರಿಸಿದ್ದಾರೆ.




