ಬೆಳಗಾವಿಯಲ್ಲಿ ಖೋಟಾ ನೋಟು ಗ್ಯಾಂಗ್ ಬಲೆಗೆ ₹2.40 ಲಕ್ಷ ಖೋಟಾ ನೋಟು ಜಪ್ತಿ – ನಾಲ್ವರು ಬಂಧನ, ಮೂವರಿಗೆ ಹುಡುಕಾಟ

Date:

ಬೆಳಗಾವಿ ನಗರದಲ್ಲಿ ₹500 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್‌ನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಗರದ ಖಡೇಬಜಾ‌ರ್ ಪ್ರದೇಶದ ಅಂಗಡಿಯಲ್ಲಿ ಖೋಟಾ ನೋಟು ಬಳಕೆ ಮಾಡಲು ಯತ್ನಿಸಿದ ವೇಳೆ ಅಂಗಡಿ ಮಾಲೀಕನಿಗೆ ಅನುಮಾನ ಮೂಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕ್ಷಿಪ್ರ ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಂದು ಕಾರು, ₹2.40 ಲಕ್ಷ ಮೌಲ್ಯದ ಖೋಟಾ ನೋಟುಗಳು ಹಾಗೂ ನಾಲ್ಕು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗೋವಾದಲ್ಲಿ ₹1 ಲಕ್ಷಕ್ಕೆ ₹2 ಲಕ್ಷ ಖೋಟಾ ನೋಟುಗಳನ್ನು ಪಡೆದು ಬೆಳಗಾವಿಗೆ ಬಂದಿದ್ದ ಗ್ಯಾಂಗ್‌ ಇಲ್ಲಿ ಚಲಾವಣೆ ಮಾಡಲು ಯತ್ನಿಸುತ್ತಿತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತರು ಮೊಹಮ್ಮದ್ ಅರ್ಬಾಜ್, ರೂಪೇಶ್‌, ಮೊಹಮ್ಮದ್ ಹುಸೇನ್ ಭಕ್ಷಿ ಹಾಗೂ ಬಿಹಾರ ಮೂಲದ ಶ್ರವಣಕುಮಾರ ಎಂದು ಗುರುತಿಸಲಾಗಿದೆ. ಒಟ್ಟು 7 ಜನರ ಗ್ಯಾಂಗ್‌ನಲ್ಲಿರುವ ಇನ್ನೂ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ನಗರ ಪೊಲೀಸ್‌ ಆಯುಕ್ತ ಭೂಷಣ ಬೊರಸೆ ಮಾಹಿತಿ ನೀಡುವಂತೆ, ಈ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಸರ್ಫರಾಜ್ ಗೋವಾ ಜೈಲಿನಲ್ಲಿ ಇದ್ದು, ಖೋಟಾ ನೋಟು ಸರಬರಾಜಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಭೀಕರ ಅಗ್ನಿ ಅವಘಡ – 15ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಈ ಸಂಬಂಧ ಬೆಳಗಾವಿ ಮಾರ್ಕೆಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...

ಬೆಳಗಾವಿ | ಮನೆಯ ಗೋಡೆ ಕುಸಿದು ಮಹಿಳೆ ಸಾವು

ರಾಜ್ಯದಲ್ಲಿ ಬೇಸಿಗೆಯ ಮಧ್ಯೆ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿದಿದ್ದು, ಮತ್ತೊಂದು...