ದೇಶದ ಅತಿ ದೊಡ್ಡ ದರೋಡೆ ಪ್ರಕರಣಕ್ಕೆ ಮೂರು ರಾಜ್ಯಗಳಿಗೆ ಸವಾಲು
ಬೆಳಗಾವಿ-ಗೋವಾ ಗಡಿ ಭಾಗದ ಚೋರ್ಲಾ ಘಾಟ್ ಮಾರ್ಗವಾಗಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು ₹400 ಕೋಟಿ ರೂ. ಹಣ ತುಂಬಿದ್ದ ಎರಡು ಕಂಟೇನರ್‌ಗಳನ್ನು ಹೈಜಾಕ್ ಮಾಡಲಾಗಿದೆ ಎನ್ನುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
2025ರ ಅಕ್ಟೋಬರ್ 16ರಂದು ನಡೆದ ಈ ದರೋಡೆ, ಸುಮಾರು ತಿಂಗಳ ಬಳಿಕ ಬಹಿರಂಗವಾಗಿರುವುದು ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
₹400 ಕೋಟಿ ರೂ. ನಗದು ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಬೆಳಗಾವಿ-ಗೋವಾ ಗಡಿಯ ಚೋರ್ಲಾ ಘಾಟ್ ಪ್ರದೇಶದಿಂದ ನಾಪತ್ತೆಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಪ್ರಕರಣ ಬೆಳಕಿಗೆ ಬರದೇ ತಡವಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಈ ರಾಬರಿ ಪ್ರಕರಣದಿಂದ ಮಹಾರಾಷ್ಟ್ರದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪೊಲೀಸರು ಸಂಯುಕ್ತವಾಗಿ ಕಂಟೇನರ್‌ಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ ಜಿಲ್ಲಾ ಆಸ್ಪತ್ರೆಯ ‘ಸಖಿ’ ಕೇಂದ್ರಕ್ಕೆ ಕೇಸ್ ವರ್ಕರ್ ನೇಮಕಕ್ಕೆ ಅರ್ಜಿ ಆಹ್ವಾನ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆಗೆ ಆದೇಶ ನೀಡಿದ್ದಾರೆ. ಪ್ರಕರಣ ಸಂಬಂಧ ನಾಸಿಕ್ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ




