ಬೆಳಗಾವಿಯಲ್ಲಿ ಭಾವೈಕ್ಯದ ಮದುವೆ: ಹಿಂದೂ ಅನಾಥ ಮಗನ ಮದುವೆ ನಡೆಸಿದ ಮುಸ್ಲಿಂ ದಂಪತಿ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಭಾವೈಕ್ಯಕ್ಕೆ ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಮುಸ್ಲಿಂ ದಂಪತಿಯೊಬ್ಬರು ಹಿಂದೂ ಧರ್ಮದ ಅನಾಥ ಮಗನನ್ನು ಸಾಕಿ ಬೆಳೆಸಿ, ಶಿಕ್ಷಣ ನೀಡಿ ಇದೀಗ ಅವರ ಮದುವೆಯನ್ನೂ ನೆರವೇರಿಸಿದ್ದಾರೆ.

ಗ್ರಾಮದ ಮೆಹಬೂಬ್ ಹಸನ್ ನಾಯಿಕವಾಡಿ (ಮುಲ್ಲಾ) ಹಾಗೂ ನೂರಜಾನ್ ದಂಪತಿಯು ಹಿಂದೂ ದಂಪತಿಗೆ ಜನಿಸಿದ ಸೋಮಶೇಖರ ಹಾಗೂ ವಸಂತ ಎಂಬ ಇಬ್ಬರು ಮಕ್ಕಳನ್ನು, ಪೋಷಕರು ನಿಧನರಾದ ಬಳಿಕ ತಮ್ಮ ಮಡಿಲಿಗೆ ಸೇರಿಸಿಕೊಂಡಿದ್ದರು. ತಮ್ಮದೇ ಮಕ್ಕಳಂತೆ ಸಾಕಿ, ಉತ್ತಮ ಶಿಕ್ಷಣ ನೀಡಿದರು.

ಭಾನುವಾರ ಕಾಡಸಿದ್ದೇಶ್ವರ ಸಭಾಭವನದಲ್ಲಿ ಸೋಮಶೇಖರಗೆ ಹಿಂದೂ-ಲಿಂಗಾಯತ ಸಂಪ್ರದಾಯದಂತೆ ವಿವಾಹ ನೆರವೇರಿಸಲಾಯಿತು. ಮದುವೆಯಲ್ಲಿ ವಧು-ವರರಷ್ಟೇ ಹಿಂದೂಗಳಾಗಿದ್ದರೆ, ಮದುವೆಯ ಸಂಪೂರ್ಣ ಜವಾಬ್ದಾರಿ ಹಾಗೂ ಖರ್ಚು-ವೆಚ್ಚವನ್ನು ಮುಸ್ಲಿಂ ಕುಟುಂಬವೇ ವಹಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಕಾಡಸಿದ್ದೇಶ್ವರ ಸಭಾಭವನದಲ್ಲಿ ಸೋಮಶೇಖರ್‌ಗೆ ಹಿಂದೂ-ಲಿಂಗಾಯತ ಸಂಪ್ರದಾಯದಂತೆ ವಿವಾಹ ನೆರವೇರಿಸಲಾಯಿತು. ಮದುವೆಯಲ್ಲಿ ವಧು-ವರರಷ್ಟೇ ಹಿಂದೂಗಳಾಗಿದ್ದರೆ, ಮದುವೆಯ ಸಂಪೂರ್ಣ ಜವಾಬ್ದಾರಿ ಹಾಗೂ ಖರ್ಚು-ವೆಚ್ಚವನ್ನು ಮುಸ್ಲಿಂ ಕುಟುಂಬವೇ ವಹಿಸಿಕೊಂಡಿತ್ತು.

ಎಸ್.ಇ.ಝಡ್‌ (ಆರ್ಥಿಕ ವಲಯದ) ಕಂಪನಿಯಲ್ಲಿ ಉದ್ಯೋಗದಲ್ಲಿರುವ ಸೋಮಶೇಖರನ ಮದುವೆ ಕಂಡು ನಾಯಿಕವಾಡಿ ದಂಪತಿ ಭಾವುಕರಾದರು. ಕುಟುಂಬದ ಸದಸ್ಯರು ಹಾಗೂ ಊರಿನ ಹಿರಿಯರು ಈ ಭಾವೈಕ್ಯದ ಕ್ಷಣಕ್ಕೆ ಸಾಕ್ಷಿಯಾದರು.

ಈ ಕುರಿತು ಮಾತನಾಡಿರುವ ಮೆಹಬೂಬ್ ಹಸನ್ ನಾಯಿಕ್ (ಮುಲ್ಲಾ) ಅವರು ಮನುಷ್ಯರೆಲ್ಲ ಒಂದೇ ಎಂಬುದು ನನ್ನ ಭಾವನೆ ಇಬ್ಬರೂ ಮಕ್ಕಳು ನಮ್ಮ ಮನೆಯಲ್ಲಿ ನಮ್ಮ ಮಕ್ಕಳಂತೆಯೇ ಬೆಳೆದರು ಅವರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಕತ್ತೆ ಕಿರುಬ ದಾಳಿ : ಎರಡು ಮೇಕೆ ಮರಿಗಳು ಸಾವು

ಧರ್ಮ ಸಂಘರ್ಷಗಳು ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ನಾಯಿಕವಾಡಿ ಕುಟುಂಬದ ಮಾನವೀಯ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...