ಬೆಳಗಾವಿ ಅಂಗನವಾಡಿ ಕೇಂದ್ರಗಳಲ್ಲಿ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಣೆ ಆರೋಪ

Date:

ಬೆಳಗಾವಿ ಜಿಲ್ಲೆಯ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಲ್ಲಿ ಸಂಗ್ರಹಿತ ಆಹಾರ ವಸ್ತುಗಳನ್ನು ಪರಿಶೀಲಿಸಿದ ಕನ್ನಡ ಹೋರಾಟಗಾರ್ತಿ ಕಸ್ತೂರಿ ಬಾವಿ ಅವರು, ಮೂರುರಿಂದ ಆರು ತಿಂಗಳ ಹಿಂದೆಯೇ ಅವಧಿ ಮುಗಿದ ಆಹಾರ ವಸ್ತುಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸ್ಥಳೀಯ ಯುವಕರೊಂದಿಗೆ ನಡೆಸಿದ ಪರಿಶೀಲನೆ ವೇಳೆ ಹುಳು ಹಿಡಿದ ರವೆ, ಸಿರಿಧಾನ್ಯ ಲಡ್ಡು, ಸಾಂಬಾರ್ ಪುಡಿ ಹಾಗೂ ಸಾಸಿವೆ ಪ್ಯಾಕೆಟ್‌ಗಳ ಮೇಲೆ ಅಕ್ಟೋಬ‌ರ್ ಮತ್ತು ನವೆಂಬರ್ 2025ರ ಅವಧಿ ದಿನಾಂಕಗಳು ನಮೂದಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

2025ರಲ್ಲೇ ಅವಧಿ ಮುಗಿದ ಸಿರಿಧಾನ್ಯ ಲಡ್ಡುಗಳನ್ನು 2026ರ ಫೆಬ್ರವರಿಯಲ್ಲಿ ವಿತರಿಸಲಾಗಿದೆ ಎನ್ನಲಾಗುತ್ತಿದ್ದು, ಈ ವಿಚಾರ ತಿಳಿದ ಪೋಷಕರಲ್ಲಿ ಆತಂಕ ಮನೆಮಾಡಿದೆ. “ಇದು ಚಿಕ್ಕ ಮಕ್ಕಳ ಜೀವದ ಜೊತೆ ಆಟವಾಡುವಂತದ್ದು. ಏನಾದರೂ ಅನಾಹುತ ಸಂಭವಿಸಿದರೆ ಹೊಣೆ ಯಾರು?” ಎಂದು ಕಸ್ತೂರಿ ಬಾವಿ ಪ್ರಶ್ನಿಸಿದ್ದಾರೆ. ಸಮಸ್ಯೆ ಒಂದೇ ಗ್ರಾಮಕ್ಕೆ ಸೀಮಿತವಲ್ಲದೆ ಇತರಡೆಗಳಲ್ಲಿಯೂ ಇರಬಹುದೆಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ.

ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಫೆಬ್ರವರಿ 7ರಂದು ನಡೆದ ಪರಿಶೀಲನೆಯಲ್ಲಿ ಯಾವುದೇ ಅವಧಿ ಮೀರಿದ ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವೈರಲ್ ವೀಡಿಯೋಗಳು ತಪ್ಪು ಮಾಹಿತಿಯನ್ನು ಹರಡುತ್ತಿದ್ದು, ಇದೊಂದು ಪಿತೂರಿಯಾಗಿರಬಹುದು ಎಂದು ತಿಳಿಸಿದ್ದಾರೆ.

ಪ್ರಕರಣದ ನಿಜಾಸ್ತಿತಿ ತಿಳಿಯಲು ಸಮಗ್ರ ತನಿಖೆ ನಡೆಸಬೇಕೆಂಬ ಒತ್ತಾಯ ಸ್ಥಳೀಯರಿಂದ ಕೇಳಿಬರುತ್ತಿದೆ. ಮಕ್ಕಳ ಆರೋಗ್ಯದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯಕ್ಕೂ ಅವಕಾಶ ಇರಬಾರದು ಎಂಬುದು ಪೋಷಕರ ಅಭಿಪ್ರಾಯವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...