ಬೆಳಗಾವಿ | ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ; ಪಿಐಎಲ್‌ ದಾಖಲಿಸುವುದಾಗಿ ಎಚ್ಚರಿಕೆ

Date:

“ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನಗಳಿಂದ ವಂಚಿತರಾಗಿ ಅತೃಪ್ತರಾಗಿರುವ ಶಾಸಕರನ್ನು ಸಮಾಧಾನಪಡಿಸುವ ಸಲುವಾಗಿ, ನಿಗಮ-ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಲಾಗುವುದು” ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ನಿಯಮಾವಳಿಗಳಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯಲ್ಲೂ ಯಾವುದೇ ದಾಖಲೆ ಲಭ್ಯವಿಲ್ಲ. ಆದರೆ, ಮುಖ್ಯಮಂತ್ರಿ ಸೂಚಿಸಿದವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಡುತ್ತೇವೆಂದು ಶಿಷ್ಟಾಚಾರ ಇಲಾಖೆ ಅಧಿಕಾರಿಗಳು ಮೌಖಿಕವಾಗಿ ಹೇಳುತ್ತಾರೆ‌. ನಿಯಮಾವಳಿಯಲ್ಲೇ ಅವಕಾಶ ಇರದಿದ್ದರೆ, ಸಂಪುಟ ದರ್ಜೆ ಸ್ಥಾನಮಾನ ಹೇಗೆ ಕೊಡುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

“ನಿಗಮ-ಮಂಡಳಿಗಳಿಗೆ ಬರುವ ಕೆಲಸಗಳಿಗೆ ಪ್ರತ್ಯೇಕವಾದ ಇಲಾಖೆಗಳಿವೆ. ಐಎಎಸ್ ಅಧಿಕಾರಿಗಳು ಅವುಗಳಿಗೆ ಪ್ರಧಾನ ಕಾರ್ಯದರ್ಶಿಗಳಾಗಿರುತ್ತಾರೆ. ಅಲ್ಲದೆ, ಆಯಾ ಇಲಾಖೆಗೆ ಸಚಿವರಿದ್ದಾರೆ. ಹೀಗಿರುವಾಗ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿರುವುದು ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹೆಣ್ಣುಭ್ರೂಣ ಹತ್ಯೆ ಪ್ರಕರಣ ಹೆಚ್ಚಳ; ಆರೋಗ್ಯಾಧಿಕಾರಿಗಳ ವಿರುದ್ಧ ಆರೋಪ

“ಶಾಸಕರ ಸಂಖ್ಯಾಬಲಕ್ಕೆ ಅನುಗುಣವಾಗಿ ಶೇ.15ರಷ್ಟು ಮಂದಿ ಮಾತ್ರ ಸಚಿವರಾಗಲು ಸಂವಿಧಾನದ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ‌. ಆದರೆ, ಅದಕ್ಕಿಂತ ಹೆಚ್ಚಿನ ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಡಲು ಅವಕಾಶವಿಲ್ಲ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...