ಬೆಳಗಾವಿ | ಮಟಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರು ಬಂಧನ

Date:

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕಾ ಜುಗಾರಿ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಂಜರ ಗಲ್ಲಿಯ ಹಳೆ ಮೊಡಕಾ ಬಜಾರ್ ಬಳಿ ಅಕ್ರಮವಾಗಿ ಮಟಕಾ ಜುಗಾರಿ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪಿಐ ಮಂಜುನಾಥ ನಾಯಕ ಅವರ ನೇತೃತ್ವದ ತಂಡ ದಾಳಿ ನಡೆಸಿತು.

ಕಾರ್ಯಾಚರಣೆಯಲ್ಲಿ ಅಶೋಕ ಪವಾರ, ಗಜಾನನ ಪಾಟೀಲ ಹಾಗೂ ಹವನ ಭಾತಖಾಂಡೆ ಬಂಧಿತರಾಗಿದ್ದಾರೆ. ಆರೋಪಿಗಳು ಸಾರ್ವಜನಿಕರಿಂದ ಹಣ ಸಂಗ್ರಹಿಸಿ ‘ಶ್ರೀದೇವಿ ನೈಟ್ ಮೇನ್ ಬಜಾರ್’ ಹೆಸರಿನಲ್ಲಿ ಓಸಿ ಮಟಕಾ ಆಟವಾಡಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತರಿಂದ ₹11,180 ನಗದು ಹಾಗೂ ಮಟಕಾ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಸಂಗ್ರಹವಾದ ಹಣವನ್ನು ಬೆಳಗಾವಿಯ ಫಾಹೀಮ್ ಕೊತ್ವಾಲ ಎಂಬಾತನಿಗೆ ತಲುಪಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮದುವೆ ಆಗದೇ ಮನನೊಂದು ಜೈಲ್ ವಾರ್ಡರ್ ಆತ್ಮಹತ್ಯೆ

ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಮಾರ್ಕೆಟ್ ಪೊಲೀಸ್‌ ಠಾಣೆಯಲ್ಲಿ ಕರ್ನಾಟಕ ಪೊಲೀಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...