ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ : ಅಶೋಕ ಪಟ್ಟಣ ನಾಮಪತ್ರ ವಾಪಸ್ ಪಡೆಯುವ ನಿರ್ಧಾರ ಮೊದಲೆ ಆಗಿತ್ತೆ ?

Date:

ಡಿಸಿಸಿ ಬ್ಯಾಂಕ್ ಚುನಾವಣೆಯ ಕಣದಿಂದ ಶಾಸಕ ಅಶೋಕ ಪಟ್ಟಣ ಹಿಂತೆಗೆದುಕೊಳ್ಳುವ ಕುರಿತು ಮೊದಲೆ ನಿರ್ಧಾರವಾಗಿತ್ತೆ ಎಂಬು ಅನುಮಾನಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಡಿಸಿಸಿ ಬ್ಯಾಂಕ್ ಚುನಾವಣೆಯ ಕಣದಿಂದ ಶಾಸಕ ಅಶೋಕ ಪಟ್ಟಣ ಹಿಂತೆಗೆದುಕೊಳ್ಳುವ ನಿರ್ಧಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳುವ ಕೊನೆಯ ದಿನದಂದು ಅಶೋಕ ಪಟ್ಟಣ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದು, ಈ ನಿರ್ಧಾರ ಮೊದಲೆ ತೆಗೆದುಕೊಳ್ಳಲಾದಿತ್ತೆ ಎಂಬ ಅನುಮಾನಗಳು ನಾಯಕರಲ್ಲಿ ಕೇಳಿ ಬರುತ್ತಿವೆ.

ಅಶೋಕ ಪಟ್ಟಣರ ಹಿಂಪಡೆಯುವಿಕೆಯಿಂದ ರಾಮದುರ್ಗ ತಾಲೂಕಿನ ಸ್ಪರ್ಧೆಯಲ್ಲಿ ಹೊಸ ಸಮೀಕರಣಗಳು ರೂಪಗೊಳ್ಳಲಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಪಕ್ಷದ ಉನ್ನತ ನಾಯಕರ ಸಲಹೆ ಅಥವಾ ಸ್ಥಳೀಯ ರಾಜಕೀಯ ಒತ್ತಡದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಅಶೋಕ ಪಟ್ಟಣ ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಈ ಸಂದರ್ಭದಲ್ಲಿ ಶಾಸಕ ಅಶೋಕ ಪಟ್ಟಣ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು.

“ನಾಮಪತ್ರ ಹಿಂದಕ್ಕೆ ಪಡೆಯಲು ಯಾವುದೇ ವಿಶೇಷ ಕಾರಣವಿಲ್ಲ. ಯಾರಿಗೆ ಬೆಂಬಲ ನೀಡಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ,” ಎಂದು ಅವರು ಸ್ಪಷ್ಟಪಡಿಸಿದರು.

ಉಸ್ತುವಾರಿ ಸಚಿವರನ್ನು ಈ ವಿಚಾರಕ್ಕಾಗಿ ಭೇಟಿಯಾಗಿಲ್ಲವೆಂಬುದನ್ನೂ ಅವರು ಹೇಳಿದರು. “ನಮಗೆ ಸೋಲಿನ ಭೀತಿ ಇಲ್ಲ. ರಾಜಕೀಯದಲ್ಲಿ ಹಲವು ಕಾರಣಗಳಿರುತ್ತವೆ,” ಎಂದ ಅವರು, ಹೊಂದಾಣಿಕೆಯ ವಿಚಾರ ಕೇಳಿದಾಗ “ಹಾಗೇ ತಿಳಿದುಕೊಳ್ಳಿ,” ಎಂದು ಕುತೂಹಲ ಹುಟ್ಟಿಸುವ ಉತ್ತರ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅಶೋಕ ಪಟ್ಟಣ, “ಮೊದಲು ಸಚಿವ ಸ್ಥಾನ ಸಿಕ್ಕ ಬಳಿಕ ಖಾತೆಯ ಬಗ್ಗೆ ವಿಚಾರ ಮಾಡೋಣ. ಈ ಬಾರಿ ಶೇಕಡಾ 99ರಷ್ಟು ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ಇದೆ,” ಎಂದರು.

“ನನ್ನದು ಯಾವುದೇ ಪ್ಯಾನೆಲ್ ಅಲ್ಲ, ನಮ್ಮದು ಸಿದ್ಧರಾಮಯ್ಯ ಟೀಮ್,” ಎಂದು ಅವರು ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...