ಬೆಳಗಾವಿ | ಚರ್ಮಗಂಟು ರೋಗದ ಭೀತಿ; ಜಾನುವಾರು ಮಾರುಕಟ್ಟೆಗೆ ನಿರ್ಬಂಧ

Date:

ಮಾರಣಾಂತಿಕ ಚರ್ಮಗಂಟು ರೋಗ (ಎಲ್ಎಸ್‌ಡಿ) ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಜಾನುವಾರುಗಳಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಿಲ್ಲಾದ್ಯಂತ ಜಾನುವಾರು ಮಾರುಕಟ್ಟೆಗಳನ್ನು ನಿರ್ಬಂಧಿಸಿದೆ.

ಜಿಲ್ಲೆಯ ಗೋಕಾಕ್, ಮೂಡಲಗಿ ಮತ್ತು ಬೈಲಹೊಂಗಲ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಒಟ್ಟು 10 ದೊಡ್ಡ ಪ್ರಮಾಣದ ಜಾನುವಾರು ಮಾರುಕಟ್ಟೆಗಳನ್ನು ಸ್ಥಾಪಿಸಲಾಗಿದೆ. ಆದರೆ, ಜಾನುವಾರುಗಳಲ್ಲಿ ಚರ್ಮರೋಗ ಪತ್ತೆಯಾಗಿರುವುದರಿಂದ ರೋಗವು ಒಂದು ಪ್ರಾಣಿಯಿಂದ ಇನ್ನೊಂದಕ್ಕೆ ಹರಡುವ ಸಾಧ್ಯತೆಗಳಿರುವುದರಿಂದ ಜಾನುವಾರು ಮಾರುಕಟ್ಟೆಗಳನ್ನು ನಿಷೇಧಿಸಲಾಗಿದೆ.

“ಮೊದಲ ಹಂತದಲ್ಲಿ 30,000ಕ್ಕೂ ಹೆಚ್ಚು ಜಾನುವಾರುಗಳು ಚರ್ಮಗಂಟು ರೋಗದಿಂದ ಬಾಧಿತವಾಗಿವೆ. 8,000 ಜಾನುವಾರುಗಳು ಮೃತಪಟ್ಟಿವೆ. ಸುಮಾರು 6,700 ಜಾನುವಾರುಗಳ ಮಾಲೀಕರಿಗೆ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಉಳಿದ ಪ್ರಾಣಿಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಸ ಪ್ರಕರಣಗಳು ಪತ್ತೆಯಾದ ಬಳಿಕ, ನಾವು ಜಿಲ್ಲೆಯಲ್ಲಿ ಜಾಗೃತಿ ಅಭಿಯಾನಗಳನ್ನು ಕೈಗೊಂಡಿದ್ದೇವೆ. ಚರ್ಮಗಂಟು ರೋಗವನ್ನು ಹೇಗೆ ತಡೆಗಟ್ಟುವುದು ಎಂಬುದರ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುತ್ತಿದ್ದೇವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಸ್ಯಾನಿಟೈಸೇಶನ್‌ನ ಭಾಗವಾಗಿ ಹಳ್ಳಿಗಳಲ್ಲಿ ಫಾಗಿಂಗ್ ತೆಗೆದುಕೊಳ್ಳಲಾಗುತ್ತಿದೆ” ಎಂದು ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಕೋಲೇರ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ನಿಫಾ ಭೀತಿ; ಕೇರಳದಿಂದ ಬರುವ ಪ್ರವಾಸಿಗರಿಗೆ ನಿರ್ಬಂಧ

“ಇಲಾಖೆಯು ಜಿಲ್ಲೆಯ ನಾನಾ ಪ್ರದೇಶಗಳಿಂದ ಜಾನುವಾರುಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸುತ್ತಿದೆ. ಎಲ್ಲ ಸಿಬ್ಬಂದಿಗಳು ಜಾಗರೂಕರಾಗಿದ್ದು, ಚರ್ಮಗಂಟುರೋಗ ಪ್ರಕರಣಗಳ ತನಿಖೆ ನಡೆಸುತ್ತಿದ್ದೇವೆ. ಚರ್ಮಗಂಟು ರೋಗ ಕೋಣಗಳಲ್ಲಿ ವೇಗವಾಗಿ ಹರಡುತ್ತದೆ. ಈ ಪ್ರಾಣಿಗಳನ್ನು ಹೊಂದಿರುವ ರೈತರು ಹೆಚ್ಚು ಜಾಗರೂಕರಾಗಿರಬೇಕು” ಎಂದು ಎಚ್ಚರಿಕೆ ನೀಡಿದರು.

ಕೆಲವು ದಿನಗಳ ಹಿಂದೆ ಬೆಂಗಳೂರಿನ ಹಿರಿಯ ವಿಜ್ಞಾನಿ ಮಂಜುನಾಥ್ ರೆಡ್ಡಿ ಅವರು ತಮ್ಮ ತಂಡದೊಂದಿಗೆ ಗೋಕಾಕ್ ತಾಲ್ಲೂಕಿನ ರಾಜಾಪುರ, ಬಳೋಬಾಳ, ತುಕ್ಕನಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಪ್ರಾಣಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...