ಬೆಳಗಾವಿ | ಆಟೋ ಚಾಲಕನಿಂದ ಹಲ್ಲೆ ಗೋವಾ ಮಾಜಿ ಶಾಸಕ ಸಾವು

Date:

ಕಾರು ಟಚ್ ಆದ ವಿಚಾರಕ್ಕೆ ಆಟೋ ಚಾಲಕ ಹಲ್ಲೆ ಮಾಡಿದ ಬಳಿಕ ಗೋವಾ ಮಾಜಿ ಶಾಸಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69) ಮೃತರು. ಬೆಳಗಾವಿಯ ಖಡೇಬಜಾರ್‌ನಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು ಈ ಘಟನೆ ನಡೆದಿದೆ. ಮೃತ ಲಾವೂ ಅವರು ಗೋವಾ ರಾಜ್ಯದ ಪೋಂಡಾ ಕ್ಷೇತ್ರಕ್ಕೆ 2012-2017ರ ಅವಧಿಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದರು. ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ತಾಗಿದೆ. ಕಾರಿನಲ್ಲಿ ಶ್ರೀನಿವಾಸ ಲಾಡ್ಜ್ ಕಡೆಗೆ ಲಾವೂ ಮಾಮಲೇದಾರ್ ಬಂದಿದ್ದರು‌. ಆಗ ಲಾಡ್ಜ್ ಎದುರು ಬಂದು ಮಾಜಿ ಶಾಸಕನ ಮೇಲೆ ಆಟೋ ಚಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಬಳಿಕ ಮೆಟ್ಟಿಲು ಏರಿ ಲಾಡ್ಜ್‌ನಲ್ಲಿರುವ ರೂಮ್‌ಗೆ ಹೊರಟಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯ ಲಾಡ್ಜ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಮಾರ್ಕೆಟ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್​, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...