ಮಹಾರಾಷ್ಟ್ರ ಚುನಾವಣೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಸಾರಾಯಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಬೃಹತ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ದಾಖಲಾತಿ ಇಲ್ಲದೇ ಗೋವಾ ಸಾರಾಯಿ ತುಂಬಿಕೊಂಡು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಸುಮಾರು 900 ಬಾಕ್ಸ್‌ಗಳಲ್ಲಿ 7 ಸಾವಿರ ಲೀಟರ್ ಮದ್ಯ, ಅಂದಾಜು 25ರಿಂದ 30 ಲಕ್ಷ ರೂ. ಮೌಲ್ಯದ ಸಾರಾಯಿಯನ್ನು ಜಪ್ತಿ ಮಾಡಲಾಗಿದೆ.
ಗೋವಾ ಮದ್ಯ ಎಲ್ಲಿಂದ ಬಂದಿದೆ ಹಾಗೂ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಕುರಿತು ತನಿಖೆ ಮುಂದುವರಿದಿದ್ದು, ಮಹಾರಾಷ್ಟ್ರ ಚುನಾವಣೆಗೆ ಮದ್ಯವನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದಿರಾ? ಬೆಳಗಾವಿ | ಅಥಣಿ ರಾಜಕೀಯ ಕುರಿತು ಮೌನ ವಹಿಸುವ ನಿರ್ಧಾರ: ರಮೇಶ್ ಜಾರಕಿಹೊಳಿ




