ಬೆಳಗಾವಿ | ಒಂಬತ್ತು ಮಂದಿ ದರೋಡೆಕೋರರು, ಓರ್ವ ಕೊಲೆ ಆರೋಪಿ ಬಂಧನ

Date:

ದರೋಡೆ, ಮನೆ ಕಳ್ಳತನ, ವಾಹನ ಮತ್ತು ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಒಂಬತ್ತು ಮಂದಿ ಡಕಾಯಿತರನ್ನು ಬಂಧಿಸಿದ್ದು, ಬಂಧಿತರಿಂದ 7.9 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ನಗದು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

ಕಿತ್ತೂರು ತಾಲೂಕಿನ ತಿಗಡೊಳ್ಳಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನೂ ಕಿತ್ತೂರು ಪೊಲೀಸರು ಭೇದಿಸಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದರು.

“ಸೆಪ್ಟಂಬರ್ 14ರಂದು ಗೋಕಾಕ್ ತಾಲೂಕಿನ ಕಣಸಗೇರಿ ಗ್ರಾಮದ ಗುರುನಾಥ ಬಡಿಗೇರ್ ಎಂಬುವರು ಗೋಕಾಕ್‌ನಿಂದ ಕಣಸಗೇರಿಗೆ ತೆರಳುತ್ತಿದ್ದಾಗ ಡಕಾಯಿತರು ತಮ್ಮ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಚಿನ್ನಾಭರಣಗಳನ್ನು ದೋಚಿದ್ದಾರೆಂದು ದೂರು ನೀಡಿದ್ದು, ಅಲ್ಲದೆ ಗೋಕಾಕ್ ನಗರ, ಅಂಕಲಗಿ ಠಾಣೆ ಮತ್ತು ಗೋಕಾಕ್ ಗ್ರಾಮೀಣ ಗ್ರಾಮಗಳಲ್ಲಿ ದರೋಡೆ, ಸುಲಿಗೆ, ದ್ವಿಚಕ್ರ ವಾಹನ ಕಳ್ಳತನ ಮತ್ತು ಜಾನುವಾರು ಕಳ್ಳತನ ಪ್ರಕರಣಗಳು ದಾಖಲಾಗಿವೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಎಸ್‌ಪಿ ವೇಣುಗೋಪಾಲ್, ಗೋಕಾಕ್ ಡಿಎಸ್‌ಪಿ ದಾದಾಪೀರ್ ಮುಲ್ಲಾ ಮಾರ್ಗದರ್ಶನದಲ್ಲಿ ಗೋಕಾಕ್ ಸಿಪಿಐ ಗೋಪಾಲ ರಾಥೋಡ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ತಂಡವು ಸೆಪ್ಟೆಂಬರ್ 18ರಂದು ಬೆನಚಿನಮರಡಿ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್‌ನ ಎಸ್‌ಪಿ (ಶಂಕರ-ಪರಶುರಾಮ) ಸರ್ಕಾರ್ ಗ್ಯಾಂಗ್‌ನ ಒಂಬತ್ತು ಆರೋಪಿಗಳನ್ನು ಬಂಧಿಸಿತ್ತು. ಈ ಒಂಬತ್ತು ಆರೋಪಿಗಳು ಗೋಕಾಕ್ ಪಟ್ಟಣ, ಸಂಕೇಶ್ವರ, ಯಮಕನಮರಡಿ, ಅಂಕಲಗಿ, ಚಿಕ್ಕೋಡಿ, ಉಪ್ಪಾರಟ್ಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ದರೋಡೆ-ಸುಲಿಗೆ, ವಾಹನ ಕಳ್ಳತನ, ಜಾನುವಾರು ಕಳ್ಳತನ ಮತ್ತು ಹನಿಟ್ರ್ಯಾಪ್ಗಳಂತಹ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ.

ಬಂಧಿತರಿಂದ ಚಿನ್ನಾಭರಣ, ನಗದು, 9 ಮೊಬೈಲ್ ಫೋನ್, 7 ದ್ವಿಚಕ್ರ ವಾಹನ, 1 ಅಶೋಕ್ ಲೇಲ್ಯಾಂಡ್, 1 ಟಾಟಾ ಏಸ್, ಕೃತ್ಯಕ್ಕೆ ಬಳಸಿದ 4 ಚಾಕು ಹಾಗೂ ಖಡ್ಗಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಚೈತ್ರಾ ಕುಂದಾಪುರ ತಂಡದಿಂದ ₹185 ಕೋಟಿ ವ್ಯವಹಾರ: ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆರೋಪ

ಗೋಕಾಕ್ ತಾಲೂಕಿನ ಬೆನಚಿನಮರಡಿ ಗ್ರಾಮದ ದುರ್ಗಪ್ಪ ವಡ್ಡರ್, ನಾಗಪ್ಪ ಮಾದರ, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣ ಪೂಜೇರಿ, ರಾಮಸಿದ್ದ ತಪಸಿ, ಬೀರಸಿದ್ದ ಗುಂಡಿ, ಉದ್ದಪ್ಪ ಖಿಲಾರಿ, ಪರಶುರಾಮ ಗೊಂಡಾಲಿ, ಆಕಾಶ ತಳವಾರ ಬಂಧಿತ ಆರೋಪಿಗಳು.

ಕೊಲೆ ಪ್ರಕರಣ

“ಕಿತ್ತೂರು ತಾಲೂಕಿನ ತಿಗಡೊಳ್ಳಿಯಲ್ಲಿ ಭಾನುವಾರ ರಾತ್ರಿ ವಿಜಯ ಅರೈರ್ (32) ಎಂಬುವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅದೇ ಗ್ರಾಮದ ಕಲ್ಲಪ್ಪ ಕ್ಯಾತನವರ್ (48) ಅವರನ್ನು ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಅವರನ್ನು ಕೊಲ್ಲಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತನಿಖೆ ಪ್ರಗತಿಯಲ್ಲಿದೆ” ಎಂದು ಎಸ್‌ಪಿ ಭೀಮಾಶಂಕರ್ ಗುಳೇದ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...