ಬೆಳಗಾವಿ | ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಪರೇಷನ್ ಹಸ್ತ; ಯಶಸ್ವಿಯಾಗುವುದೇ ಕಾಂಗ್ರೆಸ್?

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಯಶಸ್ವಿಯಾದಲ್ಲಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುವ ಸಾಧ್ಯತೆಗಳಿವೆ.

ಒಟ್ಟು 27 ಮಂದಿ ಸದಸ್ಯ ಬಲವಿರುವ ಪುರಸಭೆಯಲ್ಲಿ ಬಿಜೆಪಿಯ 16, ಕಾಂಗ್ರೆಸ್‌ನ 9 ಮತ್ತು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಕೊನೆಯ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಒಬ್ಬ ಪಕ್ಷೇತರ ಸದಸ್ಯ ಸೇರಿದಂತೆ ಒಟ್ಟು 6 ಮಂದಿ ಕಾಂಗ್ರೆಸ್ ಬೆಂಬಲಿಸಲು ಮುಂದಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿವೆ.

ಕಳೆದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ಮತ್ತು ಜಿಲ್ಲೆಯ ಬಣ ಬಡಿದಾಟದಲ್ಲಿ ತಾಲೂಕಿನಲ್ಲಿ ಬಿಜೆಪಿ ಒಡೆದ ಮನೆಯಾಗಿದೆ. ಮಾಜಿ ಶಾಸಕರ ಗುಂಪು ಒಂದೆಡೆಯಾದರೆ, ಮಂಡಲ ಅಧ್ಯಕ್ಷರ ಗುಂಪು ಇನ್ನೊಂದೆಡೆ ಬೇರ್ಪಟ್ಟಿದೆ. ಇವರಿಬ್ಬರ ಗೊಂದಲದಿಂದಾಗಿ ಬಿಜೆಪಿ ಪುರಸಭೆಯ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಬಹುದೆಂಬ ಮಾತು ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಗುಂಪುಗಳನ್ನು ಒಂದಡೆ ಸೇರಿಸುವ ನಾಯಕರಿಲ್ಲದೆ, ಪುರಸಭೆಯಲ್ಲಿ ಬಹುಮತವಿದ್ದರೂ ಬಿಜೆಪಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂಡುವ ಅನಿವಾರ್ಯತೆ ಎದುರಾದರೆ ಅಚ್ಚರಿ ಪಡಬೇಕಿಲ್ಲ.

ಪುರಸಭೆಯ ಉಳಿದ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ‘ಅ’ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ‘ಬ’ ವರ್ಗದ ಮಹಿಳೆಗೆ ಮೀಸಲಿವೆ. ಕಾಂಗ್ರೆಸ್‌ ಸದಸ್ಯರೊಬ್ಬರು ನ್ಯಾಯಾಲಯದ ಕಟ್ಟೆ ಏರಿದ್ದರಿಂದ ಚುನಾವಣೆ ಮೂಂದೂಡಲಾಗಿತ್ತು. ನ್ಯಾಯಾಲಯ ಅರ್ಜಿದಾರರ ಮತ್ತು ಸರ್ಕಾರದ ವಾದ ಆಲಿಸಿ ಕೊನೆಗೆ ಆಗಸ್ಟ್ ತಿಂಗಳಲ್ಲಿನ ಮೀಸಲಾತಿಯನ್ವಯ ಇದೇ ತಿಂಗಳು 13ರಂದು ಚುನಾವಣೆಗೆ ಮೂಹರ್ತ ನಿಗದಿಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಇಂಗ್ಲಿಷ್‌ ಜ್ಞಾನದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು: ಪ್ರೊ. ಬಿ ಈಶ್ವರಪ್ಪ

ರಾಮದುರ್ಗ ಪುರಸಭೆಯಲ್ಲಿ ಕಳೆದ ಎರಡು ಅವಧಿಯಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಗೆ ಈ ಬಾರಿ ಅಧಿಕಾರ ದೊರೆಯುವುದು ಅಷ್ಟು ಸುಲಭ ಮಾತಲ್ಲ. ಬಿಜೆಪಿ ಬಣ ಬಡಿದಾಟದ ಲಾಭ ಪಡೆದು ಶಾಸಕ ಅಶೋಕ ಪಟ್ಟಣ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ತಂದುಕೊಡುವ ಸಾಧ್ಯತೆಗಳಿವೆ. ಕಾಂಗ್ರೆಸ್‌ ನಾಯಕರು ಬಿಜೆಪಿಯ ಆರು ಜನರನ್ನು ಹಿಡಿದಿಟ್ಟುಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...