ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಕತ್ತಿ ವಿರುದ್ದ ರಾಜೇಂದ್ರ ಪಾಟೀಲ ಸ್ಪರ್ಧೆ

Date:

ಅಕ್ಟೋಬರ 19ರಂದು ನಡೆಯಲಿರುವ ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್‌ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಿಸಿದರು.

ಮಂಗಳವಾರ ನಗರದಲ್ಲಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಹುಕ್ಕೇರಿ ತಾಲೂಕಿನ 41 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ (ಪಿಕೆಪಿಎಸ್) ಮತದಾರರ ಸಭೆಯಲ್ಲಿ ಮಾತನಾಡಿದ ಅವರು,
“ನಮ್ಮ ಪ್ಯಾನೆಲ್‌ನ ಅಭ್ಯರ್ಥಿ ರಾಜೇಂದ್ರ ಪಾಟೀಲ ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಜಿಲ್ಲೆಯ ಬಹುತೇಕ ಪಿಕೆಪಿಎಸ್‌ಗಳು ನಮ್ಮ ಬೆಂಬಲಕ್ಕೆ ನಿಂತಿವೆ. ಈ ಬಾರಿಗೆ ನಾವು ಕನಿಷ್ಠ 12 ಸ್ಥಾನಗಳಲ್ಲಿ ಜಯ ಸಾಧಿಸಿ, ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯುವುದು ಶತಸಿದ್ಧ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಸಹಕಾರಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...