ಬೆಳಗಾವಿ | ಮಾನವ ಕಳ್ಳಸಾಗಣೆ ಹಾಗೂ ಜೀತಪದ್ಧತಿ ತಡೆ ಕಾರ್ಯಾಗಾರ

Date:

ಮನುಷ್ಯನಿಗೆ ಸಮಯ ಪ್ರಜ್ಞೆ ಇಲ್ಲ, ಭಾರತ ಪ್ರಕಾಶಿಸುತ್ತಿದೆ ಎಂದುಕೊಂಡಿದ್ದೇವೆ. ಆದರೆ ಭಾರತ ಪ್ರಕಾಶಿಸುತ್ತಿಲ್ಲ ಎಂದು ಪಿಎಸ್‌ಐ ಭಿಮಾಶಂಕರ ಗುಳೆದವರು ಹೇಳಿದರು.

ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸ್ಪಂದನಾ ಸಂಸ್ಥೆ, ಪೋಲಿಸ್ ಇಲಾಖೆಯ ಸಹಯೋಗದಲ್ಲಿ ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಕಾರ್ಮಿಕ ಪದ್ಧತಿ ತಡೆಗಟ್ಟುವ ಕುರಿತು ನಡೆದ ಜಿಲ್ಲಾಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು.

“ನಮ್ಮ ಪೊಲೀಸ್ ಇಲಾಖೆಯಲ್ಲಿ ನಿತ್ಯವೂ ದೌರ್ಜನ್ಯಕ್ಕೊಳಗಾದ ಪ್ರಕರಣಗಳನ್ನು ನೋಡುತ್ತಿರುತ್ತೇವೆ. ಅವುಗಳನ್ನು ತಡೆಯಲು ನಾವೂ ಕೂಡ ಪ್ರಯತ್ನ ಮಾಡುತ್ತೇವೆ. ಆದರೂ ಕೂಡ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಯಾಕೆಂದರೆ ಹಿರಿಯರ ಬುದ್ಧಿ ಮಾತುಗಳನ್ನು ಅಪರಾಧಿಗಳು ಕೇಳುತ್ತಿಲ್ಲ. ಭಾರತದಲ್ಲಿ ಶೇ.95 ರಷ್ಟು ಶಿಕ್ಷಣವಂತರಿದ್ಧಾರೆ. ಪೋಲಿಸ ಇಲಾಖೆ ಮತ್ತು ನಾವುಗಳೆಲ್ಲರೂ ಸೇರಿ ಮಾನವ ಕಳ್ಳಸಾಗಾಣಿಕೆ ಮತ್ತು ಜೀತಪದ್ಧತಿ ನಿಲ್ಲಿಸೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯವಾದಿ ಮತ್ತು ಸಾಮಾಜಿಕ ಹೋರಾಟಗಾರ ಬಿ ಎಲ್ ಪಾಟಿಲ್ ಮಾತನಾಡಿ, “ಸಂಘ ಸಂಸ್ಥೆಗಳು ಮಾನವ ಕಳ್ಳಸಾಗಾಣಿಕೆ ಮತ್ತು ಜೀತಪದ್ಧತಿ ಹಾಗೂ ಲೈಂಗಿಕ ಶೋಷಣೆಯ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದು, ಆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯೂ ಸಹಾಯ ಮಾಡಬೇಕು” ಎಂದು ಮನವಿ ಮಾಡಿದರು.

ಸ್ಪಂದನಾ ಸಂಸ್ಥೆಯ ವಿ ಸುಶೀಲಾ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಜೀತಪದ್ಧತಿ ಮತ್ತು ಅದರಿಂದ ಕಾರ್ಮಿಕರಿಗಾದ ತೊಂದರೆಗಳು ಹಾಗೂ ಮಾನವ ಕಳ್ಳಸಾಗಣಿಕೆಯ ಕುರಿತಾಗಿ ಪೂರ್ಣವಾಗಿ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ರೆಡಿಮೇಡ್ ಬಟ್ಟೆ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಧೀಶರು ಮಾತನಾಡಿ, “ಮಾನವ ಕಳ್ಳಸಾಗಾಣಿಕೆ ಮತ್ತು ಜೀತಪದ್ಧತಿ‌ ತಡೆಯಲು ನಾವೂ ಕೂಡ ಮುಂದಾಗೋಣ” ಎಂದು ತಿಳಿಸಿದರು‌‌.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...