ಬೆಳಗಾವಿ ಬಳಿ ಮಹಾರಾಷ್ಟ್ರ ಸಾರಿಗೆ ಬಸ್ ಮೇಲೆ ದಾಳಿ: ಕರ್ನಾಟಕ – ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತ

Date:

ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್‌ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ 7ರ ಬಳಿಕ ಎರಡೂ ಕಡೆಯ ಬಸ್‌ಗಳ ಸಂಚಾರ ಗಡಿಯವರೆಗೆ ಮಾತ್ರ ಸೀಮಿತಗೊಂಡಿದೆ.

ಬೆಳಗಾವಿಯಿಂದ ಮಹಾರಾಷ್ಟ್ರದ ವಿವಿಧ ನಗರಗಳಿಗೆ ನಿತ್ಯ 90 ಬಸ್‌ ಸಂಚರಿಸುತ್ತಿದ್ದವು. ಆದರೆ, ಪೊಲೀಸರ ಸೂಚನೆ ಮೇರೆಗೆ ವಾಯವ್ಯ ಸಾರಿಗೆ ಸಂಸ್ಥೆಯವರು ಸಂಜೆ 7ಕ್ಕೆ ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತಗೊಳಿಸಿದರು. ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿಯವರೆಗೆ (ಕರ್ನಾಟಕ–ಮಹಾರಾಷ್ಟ್ರ ಗಡಿಯವರೆಗೆ) ಮಾತ್ರ ಬಸ್‌ ಹೋಗುತ್ತಿವೆ.

ಬೆಳಗಾವಿ ವಿಭಾಗದಿಂದ ಒಟ್ಟು 90 ಮತ್ತು NWKRTC ಯ ಚಿಕ್ಕೋಡಿ ವಿಭಾಗದಿಂದ 125 ಬಸ್‌ಗಳು ಮಹಾರಾಷ್ಟ್ರಕ್ಕೆ ಸಂಚರಿಸುತ್ತವೆ. MSRTC ಯ ಇಪ್ಪತ್ತು ಬಸ್‌ಗಳು ಬೆಳಗಾವಿ ವಿಭಾಗಕ್ಕೆ ಮತ್ತು 70 ಬಸ್‌ಗಳು ಚಿಕ್ಕೋಡಿ ವಿಭಾಗಕ್ಕೆ ಚಲಿಸುತ್ತವೆ.
ಶುಕ್ರವಾರದಂದು, ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ ಜಿಲ್ಲಾ ಕೇಂದ್ರ ಪಟ್ಟಣದ ಹೊರವಲಯದಲ್ಲಿ, ಮರಾಠಿಯಲ್ಲಿ ಪ್ರಯಾಣಿಕರೊಂದಿಗೆ ಮಾತನಾಡದಿದ್ದಕ್ಕಾಗಿ ಕರ್ನಾಟಕ ಸಾರಿಗೆ ನಿಗಮದ ಬಸ್‌ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

‘ಮಹಾ’ ಬಸ್‌ ಚಾಲಕನಿಗೆ ಮಸಿ: 8 ಜನರ ಬಂಧನ

ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬೆಳಗಾವಿಯಲ್ಲಿ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ನವ ನಿರ್ಮಾಣ ಸೇನೆ ಕಾರ್ಯಕರ್ತರು ಶುಕ್ರವಾರ ರಾತ್ರಿ ಚಿತ್ರದುರ್ಗದ ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ– 48ರ ಗುಯಿಲಾಳ ಟೋಲ್‌ ಬಳಿ ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ವಾಹನ ತಡೆದು, ಚಾಲಕ ಹರಿ ಜಾಧವ್‌ ಅವರ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಇಡೀ ಬಸ್‌ಗೆ ಕಪ್ಪುಬಣ್ಣ ಸ್ಪ್ರೇ ಮಾಡಿದರು. ‘ಜೈ ಕರ್ನಾಟಕ, ಜೈ ಕನ್ನಡ, ಬೆಳಗಾವಿ ನಮ್ಮದು, ಮರಾಠಿಗರು ಪುಂಡಾಟಿಕೆ ನಿಲ್ಲಿಸಬೇಕು’ ಎಂದು ಬಸ್‌ ಮೇಲೆ ಬರೆದು ಪ್ರತಿಭಟಿ ಸಿದರು. ಈ ಸಂಬಂಧ ಚಾಲಕ ಹರಿ ಜಾಧವ್‌ ಅವರು, ಐಮಂಗಲ ಠಾಣೆಗೆ ದೂರು ನೀಡಿದ್ದರಿಂದ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಹಾಗೂ ಮುಖಂಡ ಲಕ್ಷ್ಮಿಕಾಂತ್‌ ಸೇರಿ ಎಂಟು ಮಂದಿಯನ್ನು ಬಂಧಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...