ಬೆಳಗಾವಿ | ಹುಬ್ಬಳ್ಳಿ ಸಮಾವೇಶದಲ್ಲಿ 1,275 ಕೋಟಿ ಹೂಡಿಕೆ ಒಪ್ಪಂದ; ಕನ್ನಡಿಗರಿಗೆ ಉದ್ಯೋಗ ನಿಯಮ

Date:

ಹುಬ್ಬಳ್ಳಿಯಲ್ಲಿ ನಡೆಸಲಾಗ ಹೂಡಿಕೆದಾರರ ಸಮಾವೇಶದಿಂದ 16 ಕಂಪನಿಗಳೊಂದಿಗೆ ರಾಜ್ಯದಲ್ಲಿ 1,275 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೇಕಡಾ 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ‌ ನಿಯಮ ರೂಪಿಸಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ಪ್ರಶ್ನೋತ್ತರ ವೇಳೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ, ಬೆಂಗಳೂರಿನಲ್ಲಿ ಕಳೆದ ವರ್ಷ 2022ರ ನವೆಂಬರ್ ತಿಂಗಳಲ್ಲಿ ನಡೆಸಿದ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶದ ಮೂಲಕ 57 ಕಂಪನಿಗಳೊಂದಿಗೆ 5,41,369 ಕೋಟಿ ರೂಪಾಯಿ ಹೂಡಿಕೆಗೆ ಕರ್ನಾಟಕ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.

ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ ಒಡಂಬಡಿಕೆಗಳ ಪೈಕಿ 7ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದ್ದು, ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭ ಮಾಡಲು 3-4 ವರ್ಷಗಳು ಹಿಡಿಯುತ್ತವೆ ಎಂದು ಅವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್ಎಂಸಿಜಿ ಸಮಾವೇಶದಲ್ಲಾದ 16ಒಡಂಬಡಿಕೆಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮೋದನೆ ಕೊಡಲಾಗಿದೆ. ಇವುಗಳಿಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಎರಡೂ ಬಗೆಯ ಯೋಜನೆಗಳು ಅನುಷ್ಠಾನದ ನಾನಾ ಹಂತಗಳಲ್ಲಿವೆ ಎಂದು ಅವರು ತಿಳಿಸಿದರು.

ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹಿಂದಿನ ಸರ್ಕಾರ 74.99ಕೋಟಿ ರೂ. ವೆಚ್ಚ ಮಾಡಿದೆ. ಹಾಗೆಯೇ, ಹುಬ್ಬಳ್ಳಿಯಲ್ಲಿ 2022ರ ನವೆಂಬರಿನಲ್ಲಿ ನಡೆಸಲಾದ ಹೂಡಿಕೆದಾರರ ಸಮಾವೇಶಕ್ಕೆ 12.23ಲಕ್ಷ ರೂ.ಗಳನ್ನು ಸರ್ಕಾರದ ವತಿಯಿಂದ ಖರ್ಚು ಮಾಡಲಾಗಿದೆ. ಕರ್ನಾಟಕ ಸರ್ಕಾರದ ನಿಯಮಾವಳಿಗಳ ಪ್ರಕಾರ ಈ ಉದ್ಯಮಗಳಲ್ಲಿ ‘ಡಿ’ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇ.100ರಷ್ಟು ಮತ್ತು ಒಟ್ಟಾರೆಯಾಗಿ ಶೇ.70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕು ಎನ್ನುವ ನಿಯಮ ರೂಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...