ಬೆಳಗಾವಿ : 10 ದಿನಗಳ ಅಧಿವೇಶನಕ್ಕೆ 21 ಕೋಟಿ ವೆಚ್ಚ; 3,000 ಕೊಠಡಿ ಬುಕ್ಕಿಂಗ್. 6,000 ಪೊಲೀಸರ ಭದ್ರತೆ

Date:

ರಾಜ್ಯದ ಚಳಿಗಾಲದ ಬೆಳಗಾವಿ ಅಧಿವೇಶನ ಸೋಮವಾರದಿಂದ ಸುವರ್ಣ ಸೌಧದಲ್ಲಿ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಇಲ್ಲಿಯವರೆಗೆ ಬೆಳಗಾವಿಯಲ್ಲಿ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಇದಕ್ಕೆ ಒಟ್ಟು 170 ಕೋಟಿ ರೂ. ವೆಚ್ಚವಾಗಿದೆ. ಕಳೆದ ವರ್ಷ 15 ಕೋಟಿ ರೂ. ಖರ್ಚಾಗಿದ್ದರೆ, ಈ ಸಲದ 10 ದಿನಗಳ ಅಧಿವೇಶನಕ್ಕೆ 21 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

ವಸತಿ ಭದ್ರತೆ ಸಿದ್ಧತೆ ಭಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕರು ಹಾಗೂ ಅಧಿಕಾರಿಗಳ ವಸತಿಗಾಗಿ ನಗರದಲ್ಲಿನ 3,000ಕ್ಕೂ ಹೆಚ್ಚು ಕೊಠಡಿಗಳನ್ನು ಬುಕ್ ಮಾಡಲಾಗಿದೆ. ಇದಾದ ಜೊತೆ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ. ಸುವರ್ಣ ಸೌಧ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಜಾರಿಯಲ್ಲಿದೆ.

ಉತ್ತರ ಕರ್ನಾಟಕ ಚರ್ಚೆಗೆ ಕಡಿಮೆ ಆದ್ಯತೆ ಎಂಬ ಆರೋಪ

ಇಷ್ಟೊಂದು ವ್ಯವಸ್ಥೆ ಹಾಗೂ ವೆಚ್ಚ ಮಾಡಿದ್ದರೂ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುವುದಿಲ್ಲ ಎಂಬ ಆರೋಪ ಪ್ರತಿವರ್ಷವೂ ಕೇಳಿ ಬರುತ್ತಿದೆ. ಸಾಮಾನ್ಯವಾಗಿ ಕೊನೆಯ ಎರಡು ದಿನಗಳು ಮಾತ್ರ ಈ ಭಾಗದ ವಿಷಯಗಳಿಗೆ ಮೀಸಲಾಗುತ್ತವೆ. ಉಳಿದ ದಿನಗಳಲ್ಲಿ ಇತರೆ ವಿಚಾರಗಳ ಚರ್ಚೆ, ಗಲಾಟೆ, ಗದ್ದಲಗಳೇ ಹೆಚ್ಚಿನದು ಎಂಬ ಟೀಕೆ ವ್ಯಕ್ತವಾಗಿದೆ.

ನೇಮಕಾತಿ ಬೇಡಿಕೆ ಪಂಚಮಸಾಲಿ ಸತ್ಯಾಗ್ರಹ

ಈ ಬಾರಿ ಅಧಿವೇಶನ ಅವಧಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳೂ ನಡೆಯಲಿವೆ. ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಯುವ ಸಮೂಹ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಇದಲ್ಲದೆ ಪಂಚಮಸಾಲಿ ಸಮಾಜ ಇನ್ನೊಮ್ಮೆ ಮೌನ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದು, ಸರ್ಕಾರದ ಪ್ರತಿಕ್ರಿಯೆ ಯಾವ ರೀತಿಯದ್ದಾಗಲಿದೆ ಎಂಬುದು ಗಮನ ಸೆಳೆದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...