ಬೆಳಗಾವಿ | ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ಪರಿಹಾರ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ ₹25 ಲಕ್ಷ ಪರಿಹಾರ ನೀಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಮಾಹಿತಿ ನೀಡಿದ್ದಾರೆ.

ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ನೇರವಾಗಿ ಜಮೆ ಮಾಡಲಾಗಿದೆ. “ಪ್ರಯಾಗ್‌ರಾಜ್‌ ಜಿಲ್ಲಾಧಿಕಾರಿ ರವಿ ಮಂದರ್‌ ಅವರೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಕಳುಹಿಸಿಕೊಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಇದನ್ನು ಪರಿಶೀಲಿಸಿದ್ದೇವೆ,” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ದುರಂತದಲ್ಲಿ ಬೆಳಗಾವಿಯ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ನಾಲ್ವರು ಕಾಲ್ತುಳಿತದಲ್ಲಿ, 10 ಮಂದಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ, ಮತ್ತು ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಣೋತ್ತರ ವರದಿ ಮತ್ತು ಪ್ರಮಾಣಪತ್ರದ ಸಂಬಂಧ ಕೆಲವು ಅಕ್ಷರದೋಷಗಳಿದ್ದರಿಂದ ಮೃತರ ಕುಟುಂಬಸ್ಥರು ಪರಿಷ್ಕರಣೆಗಾಗಿ ಮನವಿ ಮಾಡಿದ್ದರು. “ಈ ತಪ್ಪುಗಳನ್ನು ಸರಿಪಡಿಸಿ, ಪ್ರಯಾಗ್‌ರಾಜ್ ಜಿಲ್ಲಾಡಳಿತಕ್ಕೆ ವಾಟ್ಸ್‌ಆ್ಯಪ್ ಮತ್ತು ಮೇಲ್ ಮೂಲಕ ಕಳಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಶಾಸನಾತ್ಮಕ ದಾಖಲೆಗಳು ಒದಗಿಸಲಾಗುವುದು,” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...