ಬೆಳಗಾವಿ : ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ

Date:

ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ನಡೆದಿದೆ.

ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದರಿಂದ ಊಟ ಸೇವಿಸಿ ಆರೋಗ್ಯದಲ್ಲಿ ಏರುಪೇರು ಆಗಿದೆ ಎನ್ನಲಾಗಿದೆ. ಹೊಟ್ಟೆ ನೋವು, ವಾಂತಿ, ತಲೆಸುತ್ತು ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಕ್ಕಳನ್ನು ಚಿಕಿತ್ಸೆ ನೀಡಲಾಗಿದೆ. ಘಟನೆಯ ಮಾಹಿತಿ ಪಡೆದು ಖಾಸಗಿ ಆಸ್ಪತ್ರೆಗೆ ಡಿಎಚ್‌ಓ ಡಾ.ಈಶ್ವರ ಗಡಾದಿ ಹಾಗೂ ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೆಲ ಗಂಟೆ ಚಿಕಿತ್ಸೆ ನೀಡಿದ ಬಳಿಕ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದು, ಎರಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30ಕ್ಕೂ ಅಧಿಕ ಮಕ್ಕಳು ಗುಣಮುಖರಾಗಿ ಡಿಸ್ಟಾರ್ಜ್ ಆಗಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...