ಬೆಳಗಾವಿ | ದಲಿತರ ವಿರುದ್ಧ ಹಿಂಸಾತ್ಮಕ ಆಚರಣೆ ಆರೋಪ

Date:

ದಲಿತರ ವಿರುದ್ಧ ಹಿಂಸಾತ್ಮಕ ಆಚರಣೆ ಒಂದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋಣಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ದಲಿತರಿಗೆ ಪ್ರತ್ಯೇಕತೆಯ ಆರೋಪ ಕೇಳಿ ಬಂದಿದ್ದು ವ್ಯವಸ್ಥೆ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಗ್ರಾಮದ ಪ್ರಮುಖ ಹೋಟೆಲ್ ಒಂದರಲ್ಲಿ ದಲಿತರಿಗೆ ಪ್ರತ್ಯೇಕ ಪೇಪ‌ರ್ ಹಾಗೂ ನೀರು ಕುಡಿಯಲು ಗ್ಲಾಸ್ ಬಳಕೆ ಮಾಡುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಗ್ರಾಮದಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ. ಈ ಬಗ್ಗೆ ಪ್ರಶ್ನೆ ಮಾಡಿದ ದಲಿತ ಯುವಕನಿಗೆ ಹೋಟೆಲ್ ಕಾರ್ಮಿಕ ಇದು ನಮ್ಮೂರಿನ ಪದ್ಧತಿ, ಇಲ್ಲಿ ದಲಿತರಿಗೆ ಪೇಪರ್‌ನಲ್ಲಿ ಹಾಗೂ ಮೇಲ್ವರ್ಗದವರಿಗೆ ಪ್ಲೇಟ್‌ನಲ್ಲಿ ತಿಂಡಿ ಕೊಡಲಾಗುತ್ತದೆ ಎಂದು ಹೇಳಿದ್ದಾನೆ.

ಹಾಗೆ ಗ್ರಾಮದ ದೇವಸ್ಥಾನದಲ್ಲಿ ದಲಿತರಿಗೆ ಒಳ ಪ್ರವೇಶ ನಿಷೇಧಿಸಲಾಗಿದೆ. ಕ್ಷೌರಿಕರು ಸಹ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ದಲಿತ ವಿರೋಧಿ ನೀತಿ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...