ಬೆಳಗಾವಿ | ಬಸ್ ಕಂಡಕ್ಟರ್ ಮೇಲೆ ಹಲ್ಲೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಜರುಗಿಸಲು ಕ್ರಮ

Date:

ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಮರಾಠಿ ಬರಲ್ಲ ಎಂದಿದ್ದಕ್ಕೆ ಹಲ್ಲೆಗೊಳಗಾದ ಬಸ್ ನಿರ್ವಾಹಕ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜರುಗಿಸಲು ಗೃಹ ಸಚಿವರ ಜೊತೆ ಮಾತನಾಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಹಲ್ಲೆಗೆ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾರಿಗೆ ಸಂಸ್ಥೆಯ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಿರ್ವಾಹಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಕಾರಣ ಮಹಾದೇವ ಆತಂಕಗೊಂಡಿದ್ದಾರೆ, ಈ ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸರು ಸಾಮಾನ್ಯ ಜ್ಞಾನವನ್ನೂ ಬಳಸಿಲ್ಲ. ಈ ಪ್ರಕರಣ ಹಿಂದಕ್ಕೆ ಪಡೆಯುವ ಹಾಗೂ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ಜರುಗಿಸುವ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡುವುದಾಗಿ” ಸುದ್ದಿಗಾರರಿಗೆ ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...