ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

Date:

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ ಕರ್ನಾಟಕ ರಕ್ಷಣಾ ವೇದಿಕೆ (ಕರವೇ-ನಾರಾಯಣಗೌಡ ಬಣ) ಬೆಳಗಾವಿಯಲ್ಲಿ ಸದ್ದು ಮಾಡುತ್ತಿದೆ. ನಗರದಲ್ಲಿ ಹಾಕಲಾಗಿರುವ ಕನ್ನಡೇತರ ಬ್ಯಾನರ್‌ಗಳನ್ನು ಕರವೇ ಕಾರ್ಯಕರ್ತರು ಹರಿದು ಹಾಕಿದ್ದಾರೆ.

ನಗರದ ನಾನಾ ಬಡಾವಣೆಗಳಲ್ಲಿ ಹಾಕಲಾಗಿದ್ದ ಇಂಗ್ಲಿಷ್‌ ಸೇರಿದಂತೆ ಅನ್ಯ ಭಾಷೆಗಳ ಬ್ಯಾನರ್‌ಗಳು, ಫ್ಲೆಕ್ಸ್‌ಗಳನ್ನು ಹರಿದು ಹಾಕಿರುವ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕನ್ನಡವಿಲ್ಲದೆ ಬರೀ ಇಂಗ್ಲಿಷ್ ಭಾಷೆಯಲ್ಲೇ ಜಾಹಿರಾತು ಸೇರಿದಂತೆ ವಿವಿಧ ಬ್ಯಾನರ್‌ಗಳನ್ನು ಹಾಕಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ, ಎಂಇಎಸ್‌ ಮಹಾವೇಳವನ್ನು ತಡೆಯುವಂತೆ ಒತ್ತಾಯಿಸಿದ್ದಾರೆ.

ಕರವೇ ಕಾರ್ಯಕರ್ತರು ಜಾಹೀರಾತು ಫಲಕಗಳನ್ನು ಹರಿಯುವ ವೇಳೆ, ಅವರನ್ನು ತಡೆಯಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಕರವೇ ಕಾರ್ಯಕರ್ತರು ತಂದಿದ್ದ ಮಸಿ ಮತ್ತು ಕಪ್ಪು ಬಣ್ಣದ ಬಾಟಲಿಗಳನ್ನು ಪೊಲೀಸರು ಕಸಿದುಕೊಂಡಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...