ಬೆಳಗಾವಿ : ಗ್ರಾಮ ಪಂಚಾಯಿತಿಯಲ್ಲಿ ರೂ 31.84 ಲಕ್ಷ ಭ್ರಷ್ಟಾಚಾರದ ಆರೋಪ – ಸದಸ್ಯನ ನಕಲಿ ಸಹಿ ಕೃತ್ಯ ಬಯಲಿಗೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮ ಪಂಚಾಯಿತಿಯಲ್ಲಿ ಲಕ್ಷಾಂತರ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಶ್ರೀಕಾಂತ ಕೊರವರ ಅವರು ಚೆಕ್‌ ಬುಕ್‌ನಲ್ಲಿ ನಕಲಿ ಸಹಿ ಮಾಡಿ ₹31.84 ಲಕ್ಷ ರೂ. ಗ್ರಾಮ ವಿಕಾಸ ನಿಧಿ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪ ಹೊರಡಲಾಗಿದೆ.

ಮೂಲಗಳ ಪ್ರಕಾರ, ವಿವಿಧ ಏಜೆನ್ಸಿಗಳ ಹೆಸರಿನಲ್ಲಿ ಹಣ ಡ್ರಾ ಮಾಡಲಾಗಿದ್ದು, ಇದರಲ್ಲಿ ಡೇಟಾ ಎಂಟ್ರಿ ಆಪರೇಟರ್‌ಗೂ ಭಾಗವಹಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಒಟ್ಟಾರೆ 12 ಚೆಕ್‌ಗಳ ಮೇಲೆ ನಕಲಿ ಸಹಿ ಮಾಡಿ ಹಣ ತಗೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣ ಬೆಳಕಿಗೆ ಬಂದ ನಂತರ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ರಾಜೀ ಪಂಚಾಯಿತಿ ನಡೆಸಿದ್ದಾರೆ. ಈ ವೇಳೆ ಶ್ರೀಕಾಂತ ನಕಲಿ ಸಹಿ ಮೂಲಕ ಹಣ ತೆಗೆದುಕೊಂಡಿರುವುದನ್ನು ಪತ್ರದ ಮೂಲಕ ಒಪ್ಪಿಕೊಂಡು, ಮೂರು ತಿಂಗಳಲ್ಲಿ ಹಣ ಹಿಂತಿರುಗಿಸುವ ಭರವಸೆ ನೀಡಿದ್ದರು. ಆದರೆ ಆ ಅವಧಿ ಕಳೆದರೂ ಹಣ ವಾಪಸ್ ಮಾಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುಂದಾಗಿ ಪಿಡಿಓ ಮತ್ತು ಪಂಚಾಯತ್ ಅಧ್ಯಕ್ಷರು ದೂರು ದಾಖಲಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ, ಎನ್ನುವುದು ಸ್ಥಳೀಯರ ಆರೋಪ. ಈ ಹಿನ್ನೆಲೆ ವಿವಿಧ ಅನುಮಾನಗಳು ಉದ್ಭವಿಸುತ್ತಿವೆ.

ಈ ಸಂಬಂಧ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಪ್ರತಿಕ್ರಿಯೆ ನೀಡಿದ್ದು, ಪರಿಶೀಲನೆ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ,” ಎಂದು ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...