ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆ ಶವವಾಗಿ ಪತ್ತೆ

Date:

ಬೆಳಗಾವಿ–ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಬಳಿ ಭಾನುವಾರ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ಸ್ಥಳೀಯವಾಗಿ ಆತಂಕ ಮತ್ತು ಕುತೂಹಲ ಮೂಡಿಸಿದೆ.

ಖಾನಾಪುರ ತಾಲೂಕಿನ ನಂದಗಡದ ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರಾಗಿದ್ದರು.

ಅಶ್ವಿನಿ ಅ. 2 ರಂದು ಕಕ್ಕೇರಿ ಜಾತ್ರೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಜಾತ್ರೆಯಿಂದ ವಾಪಸ್ಸಾಗುವ ವೇಳೆ ಬೀಡಿ ಗ್ರಾಮದಲ್ಲಿ ಇಳಿದು ಸ್ವಲ್ಪ ಕೆಲಸ ಇದೆ ಎಂದು ಹೇಳಿದ್ದರು. ಆದರೆ ಬಳಿಕ ಮನೆಗೆ ಹಿಂದಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಗನು ಅವರ ನಾಪತ್ತೆಯ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಶನಿವಾರ ವಾಹನವೊಂದರ ಚಾಲಕ ತಿನೈಘಾಟ್ ಸೇತುವೆ ಕೆಳಗೆ ನೀರಿನಲ್ಲಿ ಶವ ತೇಲುತ್ತಿರುವುದು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿ ಪರಿಶೀಲನೆ ನಡೆಸಿದರು. ಮೃತದೇಹದ ಪಕ್ಕದಲ್ಲಿ ಸಿಕ್ಕ ಮೊಬೈಲ್‌ ಫೋನ್‌ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಪರಿಶೀಲನೆಯ ವೇಳೆ ಅಶ್ವಿನಿ ಅವರ ಮೊಬೈಲ್‌ನಿಂದ ಮನೆಯವರಿಗೆ “ಬೆಂಗಳೂರುಗೆ ಹೋಗುತ್ತಿದ್ದೇನೆ” ಮತ್ತು ಬಳಿಕ “ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂಬ ಸಂದೇಶಗಳು ಕಳುಹಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ.

ಈ ಘಟನೆ ಕುರಿತು ಕೊಲೆಯೋ, ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಅಪಘಾತವೋ ಎಂಬುದು ಸ್ಪಷ್ಟವಾಗಿಲ್ಲ. ನಂದಗಡ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...