2024–25ನೇ ಸಾಲಿನ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ, ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸುವ ಉದ್ದೇಶದಿಂದ ಒಂದು ತಿಂಗಳ ಅವಧಿಯ ಪ್ರವಾಸಿ ಮಾರ್ಗದರ್ಶಿ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗೆ ಪರಿಶಿಷ್ಟ ಜಾತಿಯ 14 ಹಾಗೂ ಪರಿಶಿಷ್ಟ ಪಂಗಡದ 14 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ದಿನಾಂಕ 12-01-2026ರ ಸಂಜೆ 5.30 ಗಂಟೆಯೊಳಗೆ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಳಗಾವಿ ಜಿಲ್ಲೆ, ಸುವರ್ಣ ವಿಧಾನ ಸೌಧ ಕಟ್ಟಡ, ಪೂರ್ವದ್ವಾರ ಪ್ರವೇಶ, ತಳ ಮಹಡಿ, ಕೊಠಡಿ ಸಂಖ್ಯೆ TP-14, ಹಳಗಾ, ಬೆಳಗಾವಿ–590020 ಇಲ್ಲಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.




