ಬೆಳಗಾವಿ : ಎಎಸ್ಐ ಹೃದಯಾಘಾತದಿಂದ ಸಾವು

Date:

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆಯುತ್ತಿರುವ ಲಕ್ಷ್ಮೀದೇವಿ ಜಾತ್ರೆಗೆ ಬಂದೋಬಸ್ತ್ ಕೈಗೊಂಡಿದ್ದ ಎಎಸ್‌ಐಗೆ ಹೃದಯಾಘಾತವಾಗಿದ್ದು, ಅವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಹುಬ್ಬಳ್ಳಿ ಎಪಿಎಂಸಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್.ಜಿ. ಮೀರಾನಾಯಕ್ (56) ಅವರು, ಗೋಕಾಕ್ ಜಾತ್ರೆಯ ಬಂದೋಬಸ್ತ್ ಕಾರ್ಯಚಟುವಟಿಕೆಗಾಗಿ ನಿಯೋಜನೆಗೊಂಡಿದ್ದರು. ಗೋಕಾಕ್‌ನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ತಂಗಿದ್ದ ಅವರು ತೀವ್ರ ಎದೆ ನೋವಿನ ಹಿನ್ನೆಲೆಯಲ್ಲಿ ಅಸ್ವಸ್ಥರಾದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆ ಫಲಕಾರಿಯಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತದೇಹವನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತರ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...