ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

Date:

ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ನವೆಂಬರ್ ತಿಂಗಳಿನಲ್ಲಿ ನಡೆದಿದ್ದು, ಇದೀಗ ಬೆಳಕಿಗೆ ಬೆಂದಿದೆ. ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ 20 ಮಂದಿ ದುರುಳರು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಮಹಿಳೆಯ ಜಮೀನಿನಲ್ಲಿ ಪೈಪ್‌ಲೈನ್ ಹಾದುಹೋಗಿತ್ತು. ಆ ಪೈಪ್‌ಲೈನ್‌ನಿಂದ ಬೆಳೆಹಾನಿಯಾಗುತ್ತಿದೆ. ಅದನ್ನು ತೆರವುಗೊಳಿಸಬೇಕೆಂದು ಆಕೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೂ, ಯಾವುದೇ ಉಪಯೋಗ ಆಗಿರಲಿಲ್ಲ. ಇದೇ ವಿಚಾರಕ್ಕೆ ಮಹಿಳೆ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರ ನಡುವೆ ವಾಗ್ವಾದವೂ ನಡೆದಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಲಾಟೆಯಾದ ಬಳಿಕ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಮಹಿಳೆ ವಿರುದ್ಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಜಾತಿ ನಿಂದನೆ ದೂರು ನೀಡಿದ್ದರು. ಇದಾದ ಬಳಿಕ, ಮತ್ತೆ ಮಹಿಳೆ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರ ನಡುವೆ ಮತ್ತೆ ಗಲಾಟೆ ನಡೆಸಿದೆ. ಈ ವೇಳೆ, ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಅಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಸಂತ್ರಸ್ತ ಮಹಿಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್​​ ಅವರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಜಿಲ್ಲಾ ಮಹಿಳೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿ ಕಲ್ಲಪ್ಪ ಡೊಂಕನ್ನವರ್, ಕಲ್ಪನಾ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಸಾಧಿಕ್ ಸೇರಿದಂತೆ 20 ಮಂದಿ ವಿರುದ್ಧ ಐಪಿಸಿ ಸೆಕ್ಷನ್​​ 1860ರಡಿ 143, 147, 354(a), 354(b), 323, 324, 384, 201, 427, 342, 307, 504, 505, 149 ಅಡಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...