ಬೆಳಗಾವಿ | ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Date:

ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿ ನೇಸರಗಿ (21) ಮೃತಪಟ್ಟ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ವೈದ್ಯರ ನಿರ್ಲಕ್ಷ್ಯವೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆರೋಪಿಸಿ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಾರ್ಚ್ 4 ರಂದು ಮಧ್ಯಾಹ್ನ 12 ಗಂಟೆಗೆ ಶಸ್ತ್ರಚಿಕಿತ್ಸೆ ಮೂಲಕ ಹೆಣ್ಣುಮಗುವಿಗೆ ಜನ್ಮನೀಡಿದ ಕೀರ್ತಿಗೆ ತೀವ್ರ ರಕ್ತಸ್ರಾವವಾಗುತ್ತಿತ್ತು. ಆದರೆ, ಆಸ್ಪತ್ರೆಯ ವೈದ್ಯರು ತಕ್ಷಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸುವ ಬದಲಿಗೆ, ಅವರನ್ನು ಜನರಲ್ ವಾರ್ಡ್‌ಗೆ ಸ್ಥಳಾಂತರಿಸಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ತಕ್ಷಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...