ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗನೂರು ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ನಿವಾಸಿ ಬಾಲಪ್ಪ ನಾಗಪ್ಪ ಉಳ್ಳಿಗೇರಿ (63) ಮೃತಪಟ್ಟಿದ್ದಾರೆ. ಅಪಘಾತದ ನಂತರ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮಹಾರಾಷ್ಟ್ರ ಚುನಾವಣೆಗೆ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ಜಪ್ತಿ, ಚಾಲಕ ಬಂಧನ
ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.




