ಬೆಳಗಾವಿ : ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತ ಬೈಕ್‌ ಸವಾರ ಸ್ಥಳದಲ್ಲೇ ಸಾವು

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಅಮಟೆ ಕ್ರಾಸ್ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮದ ದರ್ಶನ ಮೌನೇಶ ಚವ್ಹಾಣ (23) ಮೃತ. ಹಿಂಬದಿ ಸವಾರ ರಾಘು ಶಿರಕೋಳ (25) ತಲೆಗೆ ಪಟ್ಟಾಗಿದ್ದು, ಚಿಕಿತ್ಸೆಗೆಂದುಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ದರ್ಶನ ಭಾನುವಾರ ತನ್ನ ಸ್ನೇಹಿತ ರಾಘು ಜೊತೆಗೆ ತಾಲ್ಲೂಕಿನ ಪಾರವಾಡ ಬಳಿಯ ವಜ್ರಾ ಜಲಪಾತ ವೀಕ್ಷಣೆಗೆಂದು ಹುಬ್ಬಳ್ಳಿಯಿಂದ ಬೈಕ್‌ನಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ ನೀಡಿದ್ದು, ಗೂಡ್ಸ್‌ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...