ಬೆಳಗಾವಿ | ಟ್ರಕ್ ಡಿಕ್ಕಿ ಬೈಕ್ ಸವಾರ ಸಾವು

Date:

ಬೆಳಗಾವಿ ಬಾಗಲಕೋಟೆ ರಸ್ತೆಯ ಹಲಕಿ ಗ್ರಾಮದ ಬಳಿ ಟ್ರಕ್‌ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು 54 ವರ್ಷದ ದಯಾನಂದ ಮಹಾಂತಪ್ಪ ಕಂಠಿ ಎಂದು ಗುರುತಿಸಲಾಗಿದೆ. ಟ್ರಕ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...