ಜಿಲ್ಲಾ ಮಟ್ಟದ ಹಿರಿಯ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬಹಿರಂಗವಾಗಿದೆ.
ಮನೆಯ ವಿದ್ಯುತ್ ಬಲ್ಟ್ ಹೋಲ್ಡರ್ ಒಳಗೆ ಸೂಕ್ಷ್ಮ ಕ್ಯಾಮರಾ ಅಳವಡಿಸಿ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಲಾಗಿತ್ತು. ಬಳಿಕ ಆ ವಿಡಿಯೋಗಳನ್ನು ಆಧಾರವನ್ನಾಗಿ ಮಾಡಿಕೊಂಡು ₹50 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹ್ಮದ್ ಬಾಳೇಕುಂದ್ರಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳ ಮೊಬೈಲ್ ಫೋನ್‌ಗಳನ್ನು ತಾಂತ್ರಿಕವಾಗಿ ಪರಿಶೀಲಿಸಿದ ವೇಳೆ ನೂರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ಡೇಟಾ ಮರುಸ್ಥಾಪನೆ ಮಾಡಿದ ಬಳಿಕ ಮತ್ತೊಬ್ಬ ಅಧಿಕಾರಿಯ ಖಾಸಗಿ ವಿಡಿಯೋ ಸಹ ಪತ್ತೆಯಾಗಿದ್ದು, ಇದೇ ಮಾದರಿಯಲ್ಲಿ ಇನ್ನೂ ಹಲವು ಬ್ಲ್ಯಾಕ್‌ಮೇಲ್ ಪ್ರಕರಣಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಪ್ರಕರಣದ ಕುರಿತು ಪೊಲೀ:|ಮಗ್ರ ತನಿಖೆ ಮುಂದುವರೆಸಿದ್ದಾರೆ.




