ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿರುವ ವ್ಯಾಪಾರಿ ಕೆರೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಯುವಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತನನ್ನು ಜೋಕನಟ್ಟಿ ಗ್ರಾಮದ ಲಕ್ಷ್ಮಣ ಹಿರಿಗೌಡ (32) ಎಂದು ಗುರುತಿಸಲಾಗಿದೆ. ಅವರು ಮೂಡಲಗಿ ತಾಲೂಕಿನ ನಿವಾಸಿಯಾಗಿದ್ದಾರೆ.
ಅರಣ್ಯ ಪ್ರದೇಶದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡುಬಂದಿದ್ದು, ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ರಾಯಬಾಗ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ್ಯದ ನಿಖರ ಕಾರಣ ತಿಳಿದುಬರಬೇಕಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.




