ಬೆಳಗಾವಿ | ನದಿಯಲ್ಲಿ ಬಾಲಕನ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂ ಗ್ರಾಮದ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬಾಲಕ ನಾಪತ್ತೆಯಾಗಿದ್ದು, ಎರಡು ದಿನಗಳ ಶೋಧ ಕಾರ್ಯಾಚರಣೆ ಬಳಿಕ ಬಾಲಕನ ಶವ ಪತ್ತೆಯಾಗಿದೆ.

ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದ ಮನೋಜ ಲಕ್ಷ್ಮಣ ನಾಯಕ (15) ಸಾವಿಗೀಡಾದ ಬಾಲಕ ಎಂದು ತಿಳಿದು ಬಂದಿದೆ. ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಹೋಗಿದ್ದ. ಅಗ್ನಿ ಶ್ಯಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿ ಹುಡುಕಾಟ ನಡೆಸಿದಾಗ ಮುಳುಗಿ ಹೋಗಿದ್ದ ಬಾಲಕನ ಶವ ಸಿಕ್ಕಿದೆ.

ಇನ್ನು ಮೃತ ಯುವಕ ಕೊಣ್ಣೂರಿನ ರೇಲ್ವೆ ಸ್ಟೇಷನ್‌ (ಗೋಕಾಕ ರೋಡ್‌ನ) ನಿವಾಸಿ ಎಂದು ತಿಳಿದು ಬಂದಿದ್ದು, ಮಗನ ಸಾವಿನಿಂದ ಕುಟುಂಬಸ್ಥರ, ಗೆಳೆಯರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ, ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...