ಬೆಳಗಾವಿ | ಹಳೆಯ ವೈಷಮ್ಯದ ಹಿನ್ನೆಲೆ ಮಹಿಳೆಯ ಭೀಕರ ಕೊಲೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಲ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ‌ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ರಾಮದುರ್ಗ ತಾಲೂಕಿನ ಕಲಹಾಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಅದೇ ಗ್ರಾಮದ ನಿವಾಸಿ ಮಂಜುನಾಥ ಮಾದರ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಎರಡು ಕುಟುಂಬಗಳ ನಡುವಿನ ಹಳೆಯ ವೈಷಮ್ಯ ಮುಂದುವರಿದಿತ್ತು. ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದ್ದರಿಂದ ಒಂದು ಕುಟುಂಬದವರು ಊರು ಬಿಟ್ಟಿದ್ದರು. ಘಟನೆ ನಡೆದ ದಿನ ಶೇಖವ್ವ ಪಡಿತರ ಸಾಮಗ್ರಿಗಳನ್ನು ತರಲು ಕಲಹಾಲ ಗ್ರಾಮಕ್ಕೆ ಹೋಗಿದ್ದರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಮಂಜುನಾಥ್ ಆಕೆಯ ಮೇಲೆ ಕೊಡಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಸುರೇಬಾನ ಪೊಲೀಸ ಠಾಣೆಯ ಪೋಲಿಸರು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...