ಬೆಳಗಾವಿ | ಬಜೆಟ್ ಮುಸ್ಲಿಂ ಲೀಗ್ ಬಜೆಟಾ? ಕಾಂಗ್ರೆಸ್ ಬಜೆಟಾ?: ಸಿ.ಟಿ.ರವಿ

Date:

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, “ಮುಹಮ್ಮದ್ ಅಲಿ ಜಿನ್ನಾ ಧಾರ್ಮಿಕತೆ ಆಧಾರದಲ್ಲಿ ದೇಶ ವಿಭಜಿಸಿದಂತೆ, ಸಿದ್ದರಾಮಯ್ಯ ಅವರ ಬಜೆಟ್ ಕೂಡ ಮತಾಧಾರಿತ ನೀತಿಗಳನ್ನು ಅನುಸರಿಸುತ್ತಿದೆ” ಎಂದು ವ್ಯಂಗ್ಯವಾಡಿದರು. “ಈ ಬಜೆಟ್ ಮುಸ್ಲಿಂ ಲೀಗ್ ಬಜೆಟಾ? ಕಾಂಗ್ರೆಸ್ ಬಜೆಟಾ?” ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದರು.

“ಧಾರ್ಮಿಕ ಮೀಸಲಾತಿ ಸಂವಿಧಾನದ ವಿರುದ್ಧ”

“ಸಂವಿಧಾನ ರಚನಾ ಸಮಿತಿಯು ಧಾರ್ಮಿಕ ಆಧಾರದ ಮೀಸಲಾತಿಯನ್ನು ತಿರಸ್ಕರಿಸಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಶಿಕ್ಷಣ, ಉದ್ಯೋಗ, ಮತ್ತು ಸರ್ಕಾರಿ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ವಿಶೇಷ ಮೀಸಲಾತಿ ಘೋಷಿಸಿದೆ. ಹಿಂದು ಸಮುದಾಯದ ಬಡವರಿಗೆ ಇಂತಹ ಸೌಲಭ್ಯಗಳಿಲ್ಲ” ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನು ಸುವ್ಯವಸ್ಥೆಗೆ ಧಕ್ಕೆ”

ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ ಎಂದು ಸಿ.ಟಿ. ರವಿ ಕಿಡಿಕಾರಿದರು. “ಕ್ರಿಮಿನಲ್ ರಾಜಕಾರಣಕ್ಕೆ ಪ್ರೋತ್ಸಾಹ ನೀಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ” ಎಂದು ಅವರು ಆಕ್ಷೇಪಿಸಿದರು.

“ರಾಜ್ಯ ಸಾಲದ ಹೊರೆ”

“ಸಿದ್ದರಾಮಯ್ಯ ಸರ್ಕಾರ ₹4 ಲಕ್ಷ ಕೋಟಿ ಸಾಲ ಪಡೆದಿದೆ. ಆದರೆ, ಕಳೆದ ಬಜೆಟ್‌ನಲ್ಲಿ ಘೋಷಿಸಿದ ಅನುದಾನದ ಕೇವಲ 55% ಮಾತ್ರ ಖರ್ಚಾಗಿದೆ. ಉಳಿದ 45% ಹಣ ಈ ಆರ್ಥಿಕ ವರ್ಷ ಮುಗಿಯುವ ಮೊದಲೇ ಖರ್ಚು ಮಾಡಬಹುದೇ?” ಎಂದು ಪ್ರಶ್ನಿಸಿದರು. “ರಾಜ್ಯದ ಆದಾಯ ಕೊರತೆಯಿಂದ ತೆರಿಗೆ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ” ಎಂದು ಅವರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...