ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಂಕರಹಟ್ಟಿ ಗ್ರಾಮದಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗೋಕಾಕ್–ಅಥಣಿ ಮುಖ್ಯರಸ್ತೆಯಲ್ಲಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ ಹಿಂಬದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಸಾಗುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಯ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.




