ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪೂರ ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮಶಿ ಕಾಲಿಮಣಿ ಅಪ್ರಾಪ್ತ ವಯಸ್ಕೆಯಾದ 15 ವರ್ಷದ ಬಾಲಕಿಯನ್ನು 2023ರ ನವೆಂಬರ್ 5ರಂದು ವಿವಾಹವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಧ್ಯಕ್ಷನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.
ಬಂಧನದ ಭೀತಿಯಿಂದ ಅಧ್ಯಕ್ಷ ಅಡಗಿಕೊಂಡಿದ್ದು, ಬಾಲಕಿ ಪ್ರಾಪ್ತವಯಸ್ಕಳಂತೆ ತೋರಿಸಲು ನಕಲಿ ಜನನ ಪ್ರಮಾಣ ಪತ್ರ ಹಾಗೂ ದಾಖಲೆಗಳನ್ನು ಹರಡಿದ್ದಾನೆ. ಆದರೆ ಶಾಲೆಯ ಮೂಲ ಟ್ರಾನ್ಸ್ಫರ್ ಸರ್ಟಿಫಿಕೇಟ್ ಪರಿಶೀಲಿಸಿದ ಅಧಿಕಾರಿಗಳು, ಬಾಲ್ಯ ವಿವಾಹ ನಡೆದಿರುವುದು ದೃಢಪಡಿಸಿದ್ದಾರೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದ ತಂಡ ನಾಲ್ಕು ಸಲ ಬಸ್ಸಾಪೂರಕ್ಕೆ ಭೇಟಿ ನೀಡಿದರೂ ಬಾಲಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.
ಆರೋಪಿ ಗ್ರಾಮ ಪಂಚಾಯತಿಯ ಅಧ್ಯಕ್ಷನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.





