ಬೆಳಗಾವಿ | ಬಸ್ ನಿಲ್ದಾಣದಲ್ಲಿ ಸರಗಳ್ಳತನ: ಇಬ್ಬರು ಮಹಿಳೆಯರ ಬಂಧನ, ರೂ.11.25 ಲಕ್ಷ ಮೌಲ್ಯದ ಚಿನ್ನ ವಶ

Date:

ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ, ₹11.25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಡ್ಡರವಾಡಿ ನಿವಾಸಿಗಳಾದ ಆರತಿ ಅಲಿಯಾಸ್‌ ಪರೀದಾ ಚೌಗುಲೆ (26) ಹಾಗೂ ಸರಸ್ವತಿ ರೋಖಡೆ (45) ಬಂಧಿತ ಆರೋಪಿಗಳು. 2024ರಲ್ಲಿ ಇವರು ನಾಲ್ಕು ಬಾರಿ ಸರಗಳ್ಳತನ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತನಿಖಾ ತಂಡದ ನೇತೃತ್ವ ವಹಿಸಿದ್ದ ಮಾರ್ಕೆಟ್ ಠಾಣೆ ಇನ್‌ಸ್ಪೆಕ್ಟ‌ರ್ ಜೆ.ಎಂ. ಕಾಲಿಮಿರ್ಚಿ ತಿಳಿಸಿದ್ದಾರೆ.

ಬಂಧಿತ ಮಹಿಳೆಯರು ಕದ್ದ ಚಿನ್ನಾಭರಣಗಳನ್ನು ಆರತಿ ಚೌಗುಲೆ ಅವರ ಪತಿ ಶಿವಾ ಚೌಗುಲೆ ಎಂಬಾತನಿಗೆ ನೀಡುತ್ತಿದ್ದರು. ಆತ ಆಭರಣಗಳನ್ನು ಕರಗಿಸಿ ಬೆಳಗಾವಿಯ ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದರಲ್ಲಿ ಅಡವಿಟ್ಟು ಹಣ ಪಡೆದಿರುವುದು ತನಿಖೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಫೈನಾನ್ಸ್‌ ಸಂಸ್ಥೆಯಿಂದ 176 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ವಂಟಮೂರಿ ತೀರ್ಪೊಂದು ಸಾಕೇ? ತೆರೆಮರೆಗೆ ಸರಿದ ಪ್ರಕರಣಗಳಿಗೆ ನ್ಯಾಯ ಯಾವಾಗ?

ಪ್ರಕರಣದ ಪ್ರಮುಖ ಆರೋಪಿ ಶಿವಾ ಚೌಗುಲೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ನಗರ ಪೊಲೀಸ್‌ ಕಮಿಷನ‌ರ್ ಭೂಷಣ ಬೊರಸೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...