ಬೆಳಗಾವಿ | ಇಂದು ಪಶ್ಚಿಮ ಘಟ್ಟ ಸಂರಕ್ಷಣೆಯ ಮಹಾ ಧ್ವನಿ ಪ್ರೊ. ಮಾಧವ ಗಾಡ್ಗೀಳ್‌ಗೆ ಸಾರ್ವಜನಿಕ ಸಂತಾಪ ಸಭೆ

Date:

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಜೀವನವನ್ನೇ ಸಮರ್ಪಿಸಿದ ದೇಶದ ಖ್ಯಾತ ಪರಿಸರ ವಿಜ್ಞಾನಿ, ಶ್ರೇಷ್ಠ ದಾರ್ಶನಿಕ ಪ್ರೊ. ಮಾಧವ ಗಾಡ್ಗೀಳ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪರಿಸರವಾದಿಗಳು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಇಂದು ಸಂಜೆ 5.45ಕ್ಕೆ ಸಾರ್ವಜನಿಕ ಸಂತಾಪ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಗಾಡ್ಗೀಳ್ ಸಮಿತಿಯ ಮುಖ್ಯಸ್ಥರಾಗಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಹಾಗೂ ಜನಪರ ಸಂಶೋಧನೆ ನಡೆಸಿದ ಅವರು, ಪರಿಸರ ಸಂರಕ್ಷಣೆಗೆ ದಿಟ್ಟ ದೃಷ್ಟಿಕೋನ ನೀಡಿದ ಮಹಾನ್ ಚಿಂತಕರಾಗಿದ್ದರು. ಪರಿಸರ ಮತ್ತು ಮಾನವ ಬದುಕಿನ ನಡುವೆ ಸಮತೋಲನ ಅಗತ್ಯವೆಂಬ ತತ್ವವನ್ನು ಅವರು ದೇಶಾದ್ಯಂತ ಪಸರಿಸಿದ್ದರು.

83 ವರ್ಷದ ಪ್ರೊ. ಮಾಧವ ಗಾಡ್ಗೀಳ್ ಅವರು ಜನವರಿ 7ರಂದು ಪುಣೆಯಲ್ಲಿ ನಿಧನರಾಗಿದ್ದು, ಅವರ ಅಗಲಿಕೆ ಪರಿಸರ ಚಳವಳಿಗೆ ತುಂಬಲಾರದ ನಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ತಿಲಕವಾಡಿಯ ಎರಡನೇ ರೈಲ್ವೆ ಗೇಟ್ ಸಮೀಪದ ವಾರೆಕಲ್ ಹಾಲ್‌ನಲ್ಲಿ ಸಾರ್ವಜನಿಕ ಇಂದು ಸಂಜೆ 5.45ಕ್ಕೆ ಸಂತಾಪ ಸಭೆ ನಡೆಯಲಿದೆ.

1001234950

ಈ ಸಭೆಯಲ್ಲಿ ಪರ್ಯಾಯವರ್ಣಿ ಪರಿವರ್ತನ್ ಜೀವನ್ ವಿವೇಕ್ ಪ್ರತಿಷ್ಠಾನ, ಗ್ರೀನ್ ಸೇವಿಯರ್ಸ್ ಪರ್ಯಾಯವರ್ಣಿ ಫೌಂಡೇಶನ್, ತಿವೋಲಿ ಜಾಗೃತಿ ಮಹಿಳಾ ವೊಕ್ಕುಟ, ಮಂಗ್ಯಾಂಕೋಪ್ ಲೆಫ್ಟಿನೆಂಟ್ ಜನರಲ್ ಸರ್ದೇಶಪಾಂಡೆ ಸ್ಮಾರಕ ಸಹ್ಯಾದ್ರಿ ಸಂರಕ್ಷಣಾ ವ್ಯಾಖ್ಯಾನ ಕೇಂದ್ರ ಸೇರಿದಂತೆ ಅನೇಕ ಪರಿಸರ ಹೋರಾಟಗಾರರು, ಚಿಂತಕರು ಹಾಗೂ ನಾಗರಿಕರು ಭಾಗವಹಿಸಿ ಗಾಡ್ಗೀಳ್ ಅವರ ಪರಿಸರ ಹೋರಾಟವನ್ನು ಸ್ಮರಿಸಲಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...