ಬೆಳಗಾವಿ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ದೋಚಿದ ಸೈಬರ್ ವಂಚಕರು: ಬೆಳಗಾವಿಯಲ್ಲಿ ವೃದ್ಧ ಉದ್ಯಮಿ ಕಂಗಾಲು

Date:

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬ‌ರ್ ವಂಚಕರು ವೃದ್ಧ ಉದ್ಯಮಿಯೊಬ್ಬರನ್ನು ಗುರಿಯಾಗಿಸಿಕೊಂಡು ₹15 ಕೋಟಿ ಹಣ ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿದ ವಂಚಕರು, “ನಿಮ್ಮ ಬ್ಯಾಂಕ್‌ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ” ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ ತನಿಖೆ ನಡೆಯುತ್ತಿದೆ ಎಂದು ಹೇಳಿ, ಖಾತೆಯಲ್ಲಿರುವ ಹಣವನ್ನು ಸುರಕ್ಷಿತ ಖಾತೆಗೆ ವರ್ಗಾಯಿಸಲು ಸೂಚಿಸಿದ್ದಾರೆ. ತನಿಖೆ ಬಳಿಕ ಹಣವನ್ನು ಮರಳಿಸಲಾಗುವುದು ಎಂದು ನಂಬಿಕೆ ಮೂಡಿಸಿದ್ದಾರೆ.

ವಂಚಕರ ಮಾತಿಗೆ ಮರುಳಾದ ಉದ್ಯಮಿ, ಹಂತ ಹಂತವಾಗಿ ಒಟ್ಟು ₹15 ಕೋಟಿ ಹಣವನ್ನು ಅವರ ಖಾತೆಗೆ ವರ್ಗಾಯಿಸಿದ್ದಾರೆ. ನಂತರ ವಂಚಕರು ಸಂಪರ್ಕಕ್ಕೆ ಸಿಗದೇ ಇದ್ದಾಗ ಮೋಸವಾಗಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾ.18ರಂದು ಈ ಘಟನೆ ನಡೆದಿದ್ದು, ಸಂತ್ರಸ್ತರು ಬೆಳಗಾವಿ ನಗರ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಂಚಕರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಿ ₹15 ಕೋಟಿಯಲ್ಲಿ ₹90 ಲಕ್ಷವನ್ನು ತಡೆದಿದ್ದಾರೆ.

ಸೈಬ‌ರ್ ವಂಚಕರ ಬಂಧನಕ್ಕಾಗಿ ಪೊಲೀಸ್ ಕಮಿಷನ‌ರ್ ವಿಶೇಷ ತಂಡ ರಚಿಸಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?

ಸಾರ್ವಜನಿಕರಿಗೆ ಎಚ್ಚರಿಕೆ:

‘ಡಿಜಿಟಲ್ ಅರೆಸ್ಟ್’, ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಕರೆ ಮಾಡುವವರನ್ನು ನಂಬಬೇಡಿ. ಯಾವುದೇ ಅಧಿಕಾರಿಗಳು ಹಣವನ್ನು ಬೇರೆ ಖಾತೆಗೆ ವರ್ಗಾಯಿಸಲು ಸೂಚಿಸುವುದಿಲ್ಲ. ಅನುಮಾನಾಸ್ಪದ ಕರೆ ಬಂದರೆ ತಕ್ಷಣವೇ ಪೊಲೀಸ್‌ ಠಾಣೆಗೆ ದೂರು ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...

ಬೆಳಗಾವಿ | ಮನೆಯ ಗೋಡೆ ಕುಸಿದು ಮಹಿಳೆ ಸಾವು

ರಾಜ್ಯದಲ್ಲಿ ಬೇಸಿಗೆಯ ಮಧ್ಯೆ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿದಿದ್ದು, ಮತ್ತೊಂದು...