ಬೆಳಗಾವಿ | ಆನ್‌ಲೈನ್‌ ಬೆಟ್ಟಿಂಗ್‌ಗೆ ದಂಡುಮಂಡಳಿ ಸಿಇಒ ಬಲಿ

Date:

ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಹಣ ಕಳೆದುಕೊಂಡಿದ್ದ ರಕ್ಷಣಾ ಇಲಾಖೆಯ ಅಡಿಯಲ್ಲಿರುವ ದಂಡುಮಂಡಳಿಯ ಸಿಇಒ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಕೆ ಆನಂದ್‌ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಬೆಳಗಾವಿಯಲ್ಲಿರುವ ರಕ್ಷಣಾ ಇಲಾಖೆಯ ಕ್ಯಾಂಪ್‌ನಲ್ಲಿದ್ದ ಸರ್ಕಾರಿ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಅವರ ನಿವಾದ ಮೇಲೆ ಸಿಬಿಐ ದಾಳಿ ನಡೆದಿತ್ತು ಎಂದು ತಿಳಿದುಬಂದಿದೆ.

ಅವರ ಮೃತದೇಹ ಬಳಿ ಎರಡು ಡೆತ್‌ನೋಟ್‌ಗಳು ಸಿಕ್ಕಿವೆ. ಒಂದು ಡೆತ್‌ನೋಟ್‌ನಲ್ಲಿ, ತಂದೆ ತಾಯಿಗೆ ಕ್ಷಮೆಯಾಚಿಸಿದ್ದಾರೆ. “ಬೇರೆ ಪ್ರಪಂಚಕ್ಕೆ ಹೋಗುತ್ತಿದ್ದೇನೆ. ನಿಮ್ಮನ್ನ ಸರಿಯಾಗಿ ನೋಡಿಕೊಳ್ಳಲು ಆಗಲಿಲ್ಲ. ಸೋದರ ಅಥವಾ ಸಹೋದರಿಯ ಮಗುವಾಗಿ ಹುಟ್ಟಿ ಬಂದು ನಿಮ್ಮನ್ನು ನೋಡಿಕೊಳ್ಳುತ್ತೇನೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದು ಡೆತ್‌ನೋಟ್‌ನಲ್ಲಿ, “ಆನ್‌ಲೈನ್ ಮತ್ತು ಆಫ್‌ಲೈನ್‌ ಜೂಜಾಟದಲ್ಲಿ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಸಾಲ ಮಾಡಿಕೊಂಡಿದ್ದೇನೆ. ಸಾಲ ತೀರಿಸಲು ಆಗುತ್ತಿಲ್ಲ. ಹೀಗಾಗಿ, ಆತ್ಮಹತ್ಯೆ ದಾರಿ ಹಿಡಿದಿದ್ದೇನೆ” ಎಂದು ಬರೆದಿದ್ದಾರೆ.

ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಮತ್ತು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಆನಂದ್‌ ಅವರು ಎರಡು ದಿನಗಳಿಂದ ಕೊಠಡಿಯಿಂದ ಹೊರ ಬಂದಿರಲಿಲ್ಲ. ಊಟವನ್ನೂ ತೆಗೆದುಕೊಂಡಿರಲಿಲ್ಲ. ಇದನ್ನು ಗಮನಿಸಿದ ಕ್ಯಾಂಪ್‌ನಲ್ಲಿದ್ದವರು ಪೊಲೀಸರಿಗೆ ಹಾಗೂ ಎಂಎಲ್‌ಆರ್‌ಸಿ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಾಗಿಲು ಮುರಿದು ನೋಡಿದಾಗ, ಮೃತದೇಹ ಪತ್ತೆಯಾಗಿದೆ. ಹಾಸಿಗೆಯಲ್ಲಿ ವಿಷದ ಬಾಟಲಿ ಕೂಡ ಸಿಕ್ಕಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...