ಜಾರಕಿಹೊಳಿ, ಕತ್ತಿ ಹಾಗೂ ಲಕ್ಷ್ಮಣ ಸವದಿ ಕುಟುಂಬಗಳ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಬೆಳಗಾವಿ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆಗೆ ಕೊನೆಗೂ ತೆರೆ ಬಿದ್ದಿದೆ.
ಈ ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನಲ್ ನ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯ ರಾಜಕೀಯ ವಲಯದಲ್ಲೂ ಗಮನ ಸೆಳೆದಿದ್ದ ಈ ಚುನಾವಣೆಯ ಅಂತ್ಯದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಜಾರಕಿಹೊಳಿ ಶಕ್ತಿ ಮತ್ತೊಮ್ಮೆ ದೃಢಪಟ್ಟಿದೆ.
ಮಾದ್ಯಮಗಳ ಜೊತೆ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಅವರು,
ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಹಿರಿಯರ ಅಭಿಪ್ರಾಯದಂತೆ ನಡೆದಿದೆ. ಇಲ್ಲಿ ಯಾರೂ ಗೆದ್ದಿಲ್ಲ, ಯಾರೂ ಸೋಲಿಲ್ಲ ಸಹಕಾರಿ ಕ್ಷೇತ್ರವೇ ಗೆದ್ದಿದೆ, ಎಂದು ಹೇಳಿದರು.





