ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ನಾಮಪತ್ರ ಸಲ್ಲಿಕೆ ಸಮಯ ಮುಕ್ತಾಯವಾಗಿದ್ದು 6 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಬಾಲಚಂದ್ರ ಜಾರಕಿಹೊಳಿ ಬಣದ ಯರಗಟ್ಟಿ ವಿಶ್ವಾಸ ವೈದ್ಯ, ಮೂಡಲಗಿಯ ನಿಲಕಂಠ ಕಪ್ಪಲಗುದ್ದಿ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ – ಗಣೇಶ ಹುಕ್ಕೇರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬರುವ ಅಕ್ಟೋಬರ್ 13 ರಂದು ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನಾಂಕ ಇದ್ದು ಅಂದೇ ಈ ಅಭ್ಯರ್ಥಿಗಳ ಅವಿರೋಧ ಘೋಷಣೆ ಇದೆ.
ಈ ಕುರಿತು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಮಾಧ್ಯಮದವರ ಜತೆ ಮಾತನಾಡಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ ಸಮಸ್ತರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಈ ಅವಿರೋಧ ಆಯ್ಕೆಯು ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಸಂಕೇತವಾಗಿದೆ. ಮುಖ್ಯವಾಗಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಯರಗಟ್ಟಿ ತಾಲ್ಲೂಕಿನ ಎಲ್ಲಾ ಪಿ.ಕೆ.ಪಿ.ಎಸ್. (PKPS) ಸೊಸೈಟಿಗಳ ಅಧ್ಯಕ್ಷರುಗಳಿಗೆ, ಸರ್ವ ಸದಸ್ಯರುಗಳಿಗೆ, ಮತ್ತು ಎಲ್ಲ ಮುಖಂಡರುಗಳಿಗೆ ನನ್ನ ಅನಂತ ಕೃತಜ್ಞತೆಗಳು.
ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ. ಎಂದು ತಿಳಿಸಿದರು.





