ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ : ಬೆಂಬಲಿಗರ ನಡುವೆ ಮಾರಾ ಮಾರಿ

Date:

ಬೆಳಗಾವಿಯ ಈಫಾ ಹೋಟೆಲ್ ಹತ್ತಿರ ಶನಿವಾರ ಬೆಳಿಗ್ಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯ ಹಿನ್ನೆಲೆ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಜಾರಕಿಹೊಳಿ ಹಾಗೂ ಸವದಿ ಬಣದ ಬೆಂಬಲಿಗರು ಪರಸ್ಪರ ವಾಗ್ವಾದ ನಡೆಸಿ ಬಳಿಕ ಹೊಡೆದಾಡಿಕೊಂಡ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಮತದಾನಕ್ಕೆ ಅಗತ್ಯವಾದ ಡೆಲಿಗೇಷನ್ ಪಾರ್ಮ್‌ಗಳನ್ನು ತಡೆದಿದ್ದಾರೆ ಎಂಬ ಆರೋಪದಿಂದ ಗಲಾಟೆ ಉಂಟಾಗಿದೆ. ಸುಮಾರು 40 ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಿಲ್ಲ ಎಂಬ ಸವದಿ ಬಣದ ಬೆಂಬಲಿಗರ ಆಕ್ರೋಶ ವ್ಯಕ್ತವಾಗಿದೆ.

ಜಾರಕಿಹೊಳಿ ಪ್ಯಾನಲ್‌ನ ಅಭ್ಯರ್ಥಿ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಅಕ್ರಮಗಳ ಆರೋಪ ಹೊರಹೊಮ್ಮಿದೆ. ಇದೇ ವೇಳೆ ರಾಯಬಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಬಸನಗೌಡ ಆಸಂಗಿ ಬೆಂಬಲಿಗರು ಈಫಾ ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಪರಿಸ್ಥಿತಿ ಉಗ್ರಗೊಂಡಿದೆ. ಆಸಂಗಿ ಅವರು ಸವದಿ–ಕತ್ತಿ ಬಣದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಲಾಟೆಯ ಮಾಹಿತಿ ತಿಳಿದಂತೆಯೇ ಡಿಸಿಪಿ ನಾರಾಯಣ ಬರಮನಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪೊಲೀಸರು ಹೋಟೆಲ್ ಆವರಣ ಹಾಗೂ ಸುತ್ತಮುತ್ತ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಭಾರಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬಣದ ಬೆಂಬಲಿಗರನ್ನು ಅಧಿಕಾರಿಗಳು ಮನವೊಲಿಸುತ್ತಿದ್ದು, ಸ್ಥಳದಲ್ಲಿ ಇನ್ನೂ ಬಿಗುವು ಮುಂದುವರಿದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...