ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ : ಮಲ್ಲಣ್ಣ ಯಾದವಾಡಗೆ ಶಾಸಕ ಅಶೋಕ ಪಟ್ಟಣ ಬೆಂಬಲ

Date:

ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆಯು ಇಂದು ನಡೆಯುತ್ತಿದ್ದು, ರಾಮದುರ್ಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮಲ್ಲಣ್ಣ ಯಾದವಾಡ ಅವರಿಗೆ ಶಾಸಕ ಅಶೋಕ ಪಟ್ಟಣ ಅವರು ಬೆಂಬಲ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಂಬಲದಿಂದ ಮಲ್ಲಣ್ಣ ಯಾದವಾಡ ಅವರ ಗೆಲುವು ಬಹುತೇಕ ಖಚಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಸಲ್ಲಿಸಿದ್ದ ಶಾಸಕ ಅಶೋಕ ಪಟ್ಟಣ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಕುತೂಹಲ ಮೂಡಿಸಿದ್ದರು. ನಂತರ ಶಾಸಕರ ಬೆಂಬಲ ಯಾರಿಗೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿತ್ತು. ಇಂದು ಅದಕ್ಕೆ ತೆರೆ ಬಿದ್ದಿದ್ದು, ಅಶೋಕ ಪಟ್ಟಣ ಅವರು ಮಲ್ಲಣ್ಣ ಯಾದವಾಡ ಪರ ನಿಂತು ಬಾಲಚಂದ್ರ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಶಂಕರ ಢವಣ ಅವರಿಗೆ ದೊಡ್ಡ ಸವಾಲು ಎಸೆದಿದ್ದಾರೆ.

“ಮಲ್ಲಣ್ಣ ಯಾದವಾಡ ನನ್ನ ಶತ್ರುಗಳಲ್ಲ. ನಮ್ಮ ನಡುವೆ ಯಾವುದೇ ವೈಮನಸ್ಸಿಲ್ಲ. ತಾಲೂಕಿನಲ್ಲಿ ಹಣದ ಪ್ರಭಾವ ಕಡಿಮೆ ಮಾಡಬೇಕಿದೆ. ಕೆಲವು ಜನರು ಚುನಾವಣೆಯಲ್ಲಿ ಹಣ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾನು ಮಲ್ಲಣ್ಣ ಯಾದವಾಡಗೆ ಬೆಂಬಲ ನೀಡಿದ್ದೇನೆ. ವಿಧಾನಸಭಾ ಚುನಾವಣೆಯಲ್ಲಿ ನಾವು ವಿಭಿನ್ನ ಪಕ್ಷಗಳಲ್ಲಿ ಇದ್ದರೂ ಈ ಚುನಾವಣೆಗೆ ಅದರ ಸಂಬಂಧ ಇಲ್ಲ,” ಎಂದು ಶಾಸಕ ಅಶೋಕ ಪಟ್ಟಣ ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...