ಬೆಳಗಾವಿ : ಹಸುಗೂಸು ಸಾವು ವೈದ್ಯರ ನಿರ್ಲಕ್ಷ್ಯ ಆರೋಪ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ‘ತಾಲ್ಲೂಕಿನ ಮೋಳೆ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಶುಶ್ರೂಷಕರು ಹೆಚ್ಚಿನ ಪ್ರಮಾಣದಲ್ಲಿ ಡೋಸ್ ನೀಡಿ, ನಿರ್ಲಕ್ಷ್ಯ ತೋರಿದ ಪರಿಣಾಮ ಒಂದೂವರೆ ತಿಂಗಳ ಹಸುಗೂಸು ಸಾವನ್ನಪ್ಪಿದೆ’ ಎಂದು ಆರೋಪಿಸಿ ಹಸುಳೆಯ ಪಾಲಕರು ಅಥಣಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಅಥಣಿ ತಾಲ್ಲೂಕಿನ ಭರಮಣಕೊಡಿ ದುಂಡಪ್ಪ ಬೇವನೂರ ಅವರ ಮಗುವಿಗೆ ಗುರುವಾರ ಕಾಗವಾಡ ತಾಲ್ಲೂಕಿನ ಮೋಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶೂಷಕರು ನರ್ಸ್‌ಗಳು ಪೋಲಿಯೊಗೆ ಸಂಬಂಧಿಸಿದಂತೆ ಅಗತ್ಯ ಲಸಿಕೆ ನೀಡಿದ್ದರು. ರಾತ್ರಿ ಮಗುವಿಗೆ ಜ್ವರ ಕಾಣಿಸಿದ್ದರಿಂದ ಅಥಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿನ ಸ್ಥಿತಿ ಹದಗೆಟ್ಟಿದ್ದಕ್ಕೆ ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿ ಮಗು ಮೃತಪಟ್ಟಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಗುವಿಗೆ ಹೃದಯ ತೊಂದರೆ ಇತ್ತು. ಆದರೂ ಮಗುವಿಗೆ ಲಸಿಕೆ ನೀಡಬಹುದು. ಲಸಿಕೆ ನೀಡಿದಾಗ ಸ್ವಲ್ಪ ಮಟ್ಟಿಗೆ ಜ್ವರ ಬರುತ್ತವೆ. ಈಗಾಗಲೇ ನಾಲೈದು ಮಕ್ಕಳಿಗೆ ನೀಡಲಾಗಿದೆ. ಏನೂ ತೊಂದರೆ ಆಗಿಲ್ಲ. ಮಗುವಿಗೆ ರಾತ್ರಿ ಜ್ವರ ಹೆಚ್ಚಾದರೂ ಆಸ್ಪತ್ರೆಗೆ ತೋರಿಸದ ಪಾಲಕರು, ಬೆಳಿಗ್ಗೆ ಅಥಣಿ ಖಾಸಗಿ ಆಸ್ಪತ್ರೆಗೆ ತೋರಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಮಾಡಲು ಮುಂದಾಗಿದ್ದು ಆಸ್ಪತ್ರೆಗೆ ಬರುವುದಕ್ಕಿಂತ ಮೊದಲೇ ಮಗು ಸಾವನಪ್ಪಿತ್ತು’ ಎಂದು ಅಥಣಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...