ಬೆಳಗಾವಿ | ಆರೋಪಿಗಳ ರಕ್ಷಣೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹ

Date:

ಬೀದರ್‌ನ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು ಬೆಳಗಾವಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡುತ್ತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದುರುಪಯೋಗದ ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಬೀದರ್‌ನ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ತಿಪ್ಪಣ್ಣ ಸಿರ್ಸಿ ಹಾಗೂ ಅಧಿಕಾರಿಯಾಗಿದ್ದ ರವೀಂದ್ರ ರತ್ನಾಕರ್ ಅವರ ವಿರುದ್ಧ ಕ್ರಮವಾಗಿ ₹26 ಕೋಟಿ ಹಾಗೂ ₹6 ಕೋಟಿ ಹಣದ ದುರುಪಯೋಗದ ಆರೋಪಗಳು ಇದ್ದವು ಎಂದು ರೊಟ್ಟೆ ತಿಳಿಸಿದರು. ಆದರೆ, ಈ ಆರೋಪಿಗಳ ವಿರುದ್ಧ ಈವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಬ್ಬರು ಅಧಿಕಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಕ್ಷಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ರೊಟ್ಟೆ ಮಾಡಿದರು. ಅವರು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗಮನಹರಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಜುಲೈ 14ರಂದು ಕಾಂಗ್ರೆಸ್‌ನ ಎಂಎಲ್‌ಸಿ ಅರವಿಂದಕುಮಾರ್ ಅರಳಿ ಈ ವಿಷಯವನ್ನು ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪಿಸಿದ್ದ ಹಿನ್ನೆಲೆಯಲ್ಲಿ, ಸರ್ಕಾರ ತನಿಖಾ ತಂಡ ರಚಿಸಿ, ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿತ್ತು. ನಂತರ, 2024ರ ಏಪ್ರಿಲ್ 6ರಂದು ಹುಮ್ನಾಬಾದ್ ಶಾಸಕ ಸಿದ್ದು ಪಾಟೀಲ ಕೂಡ ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ್ದರು.

2025ರ ಮೇ 14ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯಲ್ಲಿ, ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರೆ, ಇಲಾಖೆಯ ಕಾರ್ಯದರ್ಶಿ ಶಾಮಲಾ ಇಟ್ಬಾಲ್ ಅವರಿಂದ ಸಂಸದೆಗೆ ಕಳುಹಿಸಲಾದ ಅಮಾನತು ಕಡತವು ಈವರೆಗೆ ಅನುಮೋದನೆಯಿಂದ ಪಾಸಾಗಿಲ್ಲ ಎಂದು ತಿಳಿದುಬಂದಿದೆ.

“ದುರುಪಯೋಗದ ಆರೋಪಿಗಳ ರಕ್ಷಣೆ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಅವರ ಸಂಪುಟದಿಂದ ತಕ್ಷಣ ಕೈಬಿಡಬೇಕು,” ಎಂದು ಓಂಪ್ರಕಾಶ್ ರೊಟ್ಟೆ ಆಗ್ರಹಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...